ಶಿಗ್ಗಾವಿ: ‘ಪಟ್ಟಣದ ಹುಲಗೂರ ರಸ್ತೆಯ ಸಂಗನಬಸವ ಮಂಗಲ ಭವನದಲ್ಲಿ ನ.15ರಂದು ಬೆಳಿಗ್ಗೆ 10 ಗಂಟೆಗೆ ತಾಲ್ಲೂಕು ಮಟ್ಟದ ಸರ್ಕಾರಿ ನೌಕರರ ಸಮಾವೇಶ, ಸರ್ವ ಸದಸ್ಯರ ಸಾಮಾನ್ಯ ಸಭೆ, ಉತ್ತಮ ಸರ್ಕಾರಿ ನೌಕರರ ಪ್ರಶಸ್ತಿ ಪುರಸ್ಕಾರ ಸಮಾರಂಭದ ನಡೆಯಲಿದ್ದು, ಪ್ರತಿ ನೌಕರರು ಸಮಾರಂಭದಲ್ಲಿ ಪಾಲ್ಗೊಳ್ಳಬೇಕು’ ಎಂದು ಸರ್ಕಾರಿ ನೌಕರರ ತಾಲ್ಲೂಕು ಅಧ್ಯಕ್ಷ ಅರುಣಗೌಡ ಹುಡೇದಗೌಡ್ರ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಸಂಘದ ಸಭಾಭವನದಲ್ಲಿ ಗುರುವಾರ ನಡೆದ ತಾಲ್ಲೂಕುಮಟ್ಟದ ಸರ್ಕಾರಿ ನೌಕರರ ಸಮಾವೇಶ, ಸರ್ವ ಸದಸ್ಯರ ಸಾಮಾನ್ಯ ಸಭೆ, ಉತ್ತಮ ಸರ್ಕಾರಿ ನೌಕರರ ಪ್ರಶಸ್ತಿ ಪುರಸ್ಕಾರ ಸಮಾರಂಭದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪಟ್ಟಣದಲ್ಲಿ ಪ್ರಥಮ ಬಾರಿಗೆ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ತಾಲ್ಲೂಕಿನಲ್ಲಿ ಸುಮಾರು 26 ಸರ್ಕಾರಿ ಇಲಾಖೆಗಳಲ್ಲಿ ಸುಮಾರು 1,350 ನೌಕರರಿದ್ದು, ಸುಮಾರು 1 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನೌಕರರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡಿ ಉತ್ತಮ ಸರ್ಕಾರಿ ನೌಕರನೆಂದು 26 ನೌಕರರಿಗೆ ಪ್ರಶಸ್ತಿ ಪುರಸ್ಕಾರ ನೀಡಲಾಗುತ್ತಿದೆ’ ಎಂದು ತಿಳಿಸಿದರು.

‘ವಿರಕ್ತಮಠದ ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ನಾಮಫಲಕ ಅನಾವರಣಗೊಳಿಸುವರು. ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶಪ್ಪ ಕರಿಗಾರ ಭಾವಚಿತ್ರ ಅನಾವರಣ ಮಾಡುವರು. ಸರ್ಕಾರಿ ನೌಕರರ ತಾಲ್ಲೂಕು ಅಧ್ಯಕ್ಷ ಅರುಣಗೌಡ ಹುಡೇದಗೌಡ್ರ ಅಧ್ಯಕ್ಷತೆ ವಹಿಸುವರು’ ಎಂದು ಹೇಳಿದರು.

‘ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ, ಉಪ ಸಭಾಪತಿ ರುದ್ರಪ್ಪ ಲಮಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜೀಮ್ಪೀರ್ ಖಾದ್ರಿ, ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಶಾಸಕರು, ನೌಕರರ ಸಂಘದ ವಿವಿಧ ಜಿಲ್ಲಾ ಮತ್ತು ತಾಲ್ಲೂಕು ಘಟಕಗಳ ಅಧ್ಯಕ್ಷರು, ನೌಕರರು ಭಾಗವಹಿಸುವರು. ಪ್ರತಿ ನೌಕರರು ಸ್ವಯಂ ಸೇವಕರಂತೆ ಪಾಲ್ಗೊಂಡು ಕಾರ್ಯನಿರ್ವಹಿಸುವ ಮೂಲಕ ಸಮಾವೇಶದ ಯಶಸ್ವಿಗೆ ಕಾರಣರಾಗಬೇಕು’ ಎಂದು ಮನವಿ ಮಾಡಿದರು.

ಸರ್ಕಾರಿ ನೌಕರರ ತಾಲ್ಲೂಕು ಕಾರ್ಯದರ್ಶಿ ಶಬ್ಬೀರ ಮನಿಯಾರ್, ಖಜಾಂಚಿ ರಮೇಶ ಹರಿಜನ, ಕಾರ್ಯಾಧ್ಯಕ್ಷ ಶಿವಯೋಗಿ ದೋಟಾಲಿ, ಉಪಾಧ್ಯಕ್ಷ ಶಿವಾನಂದ ಬಳಿಗೇರ, ವಿದ್ಯಾ ಖುರ್ಸಾಪುರ, ಮಂಜುಳಾ ಹೊಳೆಸಿರಿಯಾರ, ನಾಗರಾಜ ಉಪ್ಪಾರ, ನಾಗರಾಜ ಲಮಾಣಿ, ಶಿವಶರಣಯ್ಯ ನೀಲಗುಂದಿಮಠ, ಮಾರುತಿ ಕುಂದಗೋಳ, ಆನಂದಗೌಡ ಹಿರೇಗೌಡರ, ಸಂಜೀವ ಪೂಜಾರ, ಅಶೋಕ ಧರಿಯಪ್ಪನವರ, ಸಂಘದ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.