ಹಿರೇಕೆರೂರ: ‘ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳನ್ನು ಹೆಚ್ಚಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ತಾಲ್ಲೂಕಿನ ಹಂಸಭಾವಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಹಾಗೂ ಗ್ರಾಮೀಣಾಭಿವೃದ್ಧಿ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ದತ್ತು ಸಮಿತಿ ವತಿಯಿಂದ ಈಚೆಗೆ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಿ ಹೋಗುವ ಸ್ಥಿತಿಗೆ ತಲುಪಿವೆ. ಸೌಹಾರ್ದ ಸಹಕಾರಿ ಸಂಘವು ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿ ಪಡಿಸುವ ಮುಂದಾಳತ್ವ ವಹಿಸಿರುವುದು ಶ್ಲಾಘನೀಯ’ ಎಂದರು.

ದತ್ತು ಸಮಿತಿ ಅಧ್ಯಕ್ಷ ಹೂವಪ್ಪ ರಾಗಿಕೊಪ್ಪ, ‘ಸಂಘವು ಸರ್ಕಾರಿ ಶಾಲೆ ದತ್ತು ಪಡೆದು ಗುಣಮಟ್ಟದ ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ಮುಂದಾಗಿದೆ’ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಮಡಿವಾಳರ, ಫಿಎಲ್ಡಿ ಬ್ಯಾಂಕ್ ನಿರ್ದೇಶಕ ಷಣ್ಮುಖಯ್ಯ ಮಳೆಮಠ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮೃತ್ಯುಂಜಯ ಬಾಸೂರ, ದತ್ತು ಸಮಿತಿ ನಿರ್ದೇಶಕ ಮೋಹನ್ ಗೌಡ ಪಾಟೀಲ, ಡಾ.ಶಿವಕುಮಾರ ಭರಮ್ಮಣ್ಣನವರ, ದೈಹಿಕ ಶಿಕ್ಷಣ ಪರೀವಿಕ್ಷಕ ಎಸ್.ಟಿ . ಲಮಾಣಿ, ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.