ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿ ನೆಪದಲ್ಲಿ ಜನರಿಂದ ಹಣ ದೋಚುತ್ತಿರುವ ಸರ್ಕಾರ: ಬಿ.ಸಿ.ಪಾಟೀಲ

Published 8 ಸೆಪ್ಟೆಂಬರ್ 2023, 16:26 IST
Last Updated 8 ಸೆಪ್ಟೆಂಬರ್ 2023, 16:26 IST
ಅಕ್ಷರ ಗಾತ್ರ

ಹಾವೇರಿ: ‘ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಜನರ ಮೇಲೆ ತೆರಿಗೆಗಳ ಭಾರ ಹೊರಿಸಿ, ಹಣ ದೋಚುತ್ತಿದೆ. ಲೋಡ್‌ ಶೆಡ್ಡಿಂಗ್‌ ಮಾಡಿ, ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್‌ ನೀಡುತ್ತಿಲ್ಲ’ ಎಂದು ಬಿಜೆಪಿ ನಾಯಕ ಬಿ.ಸಿ.ಪಾಟೀಲ ವಾಗ್ದಾಳಿ ನಡೆಸಿದರು. 

ಹಿರೇಕೆರೂರು ಪಟ್ಟಣದಲ್ಲಿ ಶುಕ್ರವಾರ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,‘ಈ ಹಿಂದೆ ಸಿದ್ದರಾಮಯ್ಯ ಸರ್ಕಾರವಿದ್ದಾಗಲೂ ಅತಿ ಹೆಚ್ಚು ರೈತ ಆತ್ಮಹತ್ಯೆಗಳು ಆಗಿದ್ದವು. ಈಗಲೂ ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಹೆಚ್ಚಾಗಿವೆ. ರೈತರ ಸಂಕಷ್ಟಕ್ಕೆ ಸ್ಪಂದಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದರು.

‘ರೈತರ ಆತ್ಮಹತ್ಯೆ ಬಗ್ಗೆ ಸಚಿವ ಶಿವಾನಂದ ಪಾಟೀಲ ಹಗುರವಾಗಿ ಮಾತನಾಡಿದ್ದು ಖಂಡನೀಯ. ನಾವೆಲ್ಲರೂ ಸೇರಿ ₹1 ಕೋಟಿ ಕೊಡುತ್ತೇವೆ. ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ? ಹಣಕ್ಕಾಗಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಲ್ಲ.  ರೈತರನ್ನು ಅವಮಾನಿಸಿದ ಅವರು ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು’ ಎಂದು ಒತ್ತಾಯಿಸಿದರು. 

ಆಪರೇಷನ್ ಹಸ್ತದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಯಾರಾದರೂ ಕಾಂಗ್ರೆಸ್‌ ಪಕ್ಷಕ್ಕೆ ಹೋದರೆ ಲೋಕಸಭಾ ಚುನಾವಣೆ ಬಳಿಕ ಅವರದ್ದು ನಾಯಿಪಾಡಾಗುತ್ತದೆ. ಕೊನೆಯ ಬೆಂಚ್‌ನಲ್ಲಿ ಕೂರಬೇಕಾಗುತ್ತದೆ’ ಎಂದು ವ್ಯಂಗ್ಯವಾಡಿದರು. 

ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ಅವರು ತಮ್ಮ ಮಗನಿಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ ಕೊಡಿಸುವ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈಶ್ವರಪ್ಪನವರ ಮಗನೇ ಬಿಜೆಪಿ ಅಭ್ಯರ್ಥಿ ಎಂದು ಪಕ್ಷದ ವರಿಷ್ಠರು ಹೇಳಬೇಕಲ್ವಾ? ಹಾವೇರಿ–ಗದಗ ಕ್ಷೇತ್ರದಲ್ಲಿ ಗೆಲುವು ಅಷ್ಟು ಸುಲಭವಲ್ಲ. ಯಾವ ಜಾತಿಗಾದರೂ ಟಿಕೆಟ್‌ ಕೊಡಲಿ, ಹಾವೇರಿ–ಗದಗ ಜಿಲ್ಲೆಯವರಿಗೆ ಟಿಕೆಟ್‌ ಕೊಟ್ಟರೆ ಗೆಲ್ಲಿಸಲು ಪ್ರಯತ್ನಿಸುತ್ತೇವೆ’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT