ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ಯಾಡಗಿ: ಸರ್ಕಾರಿ ಪಾಲಿಟೆಕ್ನಿಕ್‌ ಆರಂಭಕ್ಕೆ ಅನುಮತಿ

Published 1 ಜೂನ್ 2024, 16:26 IST
Last Updated 1 ಜೂನ್ 2024, 16:26 IST
ಅಕ್ಷರ ಗಾತ್ರ

ಬ್ಯಾಡಗಿ: ಪಟ್ಟಣದ ಹಂಸಭಾವಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ₹10 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡದಲ್ಲಿ ಸರ್ಕಾರಿ ಪಾಲಿಟೆಕ್ನಿಕ್‌ ಜುಲೈ 1ರಿಂದ ಕಾರ್ಯರಂಭ ಮಾಡಲಿದೆ.

ಈಗಾಗಲೆ ನಾಲ್ಕು ಡಿಪ್ಲೊಮಾ ಕೋರ್ಸ್‌ಗಳ ಆರಂಭಕ್ಕೆ ಕಾಲೇಜು ಮತ್ತು ತಾಂತ್ರಿ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಪ್ರತಿ ಕೋರ್ಸ್‌ಗೆ 63 ವಿದ್ಯಾರ್ಥಿಗಳಂತೆ ಒಟ್ಟು 252 ವಿದ್ಯಾರ್ಥಿಗಳು ಪ್ರವೇಶ ಪಡೆಯಲು ಅವಕಾಶವಿದೆ. ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿದ ಆಸಕ್ತರು ನೇರವಾಗಿ ತಮ್ಮ ಮೂಲ ದಾಖಲೆಗಳೊಂದಿಗೆ ಕಾಲೇಜಿಗೆ ಭೇಟಿ ನೀಡಿ ನಿಗದಿತ ಶುಲ್ಕ ಪಾವತಿಸಿ ಪ್ರವೇಶ ಪಡೆದುಕೊಳ್ಳಬಹುದು.

ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಶನ್‌ ಎಂಜಿನಿಯರಿಂಗ್‌, ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌, ಸಿವಿಲ್‌ ಎಂಜಿನಿಯರಿಂಗ್‌, ಕ್ಲೌಡ್‌ ಕಂಪ್ಯೂಟಿಂಗ್‌ ಕೋರ್ಸ್‌ಗಳಿಗೆ ನವದೆಹಲಿಯ ಎಐಸಿಟಿಇ ಅನುಮೋದನೆ ನೀಡಿದೆ. ಹೆಚ್ಚಿನ ಮಾಹಿತಿಗೆ ಮೊ 9481450478 ಸಂಪರ್ಕಿಸುವಂತೆ ಪ್ರಾಚಾರ್ಯ ಚಂದ್ರಶೇಖರ ಗಂಟಿಸಿದ್ದಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT