ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಹೂ ಬೆಳೆಗಾರರಿಗೆ ಪರಿಹಾರ ಧನ

Last Updated 14 ಮೇ 2020, 14:48 IST
ಅಕ್ಷರ ಗಾತ್ರ

ಹಾವೇರಿ: ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ನಷ್ಟ ಹೊಂದಿರುವ ಪುಷ್ಪ ಬೆಳಗಾರರಿಗೆ ಸರ್ಕಾರ ಪರಿಹಾರ ಘೋಷಿಸಿದೆ. ಹಾನಿಗೊಳಗಾದ ಜಿಲ್ಲೆಯ ಹೂವಿನ ಬೆಳೆಗಾರರಿಂದ ಪರಿಹಾರ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ಫಲಾನುಭವಿಗೆ ಒಂದು ಹೆಕ್ಟೇರ್ ವಿಸ್ತೀರ್ಣಕ್ಕೆ ಮಿತಿಗೊಳಿಸಿ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಹೆಕ್ಟೇರ್‌ಗೆ ₹ 25 ಸಾವಿರ ಗರಿಷ್ಠ ಪರಿಹಾರಧನ ಘೋಷಿಸಲಾಗಿದೆ. ಪರಿಹಾರ ಪಡೆಯುವ ಫಲಾನುಭವಿಗಳು ರೈತರಾಗಿರಬೇಕು ಹಾಗೂ ಜಮೀನು ಅವರ ಹೆಸರಿನಲ್ಲಿರಬೇಕು. ಜಂಟಿ ಖಾತೆಯಾಗಿದ್ದಲ್ಲಿ ಇತರ ಖಾತೆದಾರರ ಒಪ್ಪಿಗೆ ಪತ್ರ ಪಡೆದಿರಬೇಕು (ನೋಟರಿ ದೃಢೀಕರಣ ಮಾಡಿಸುವುದು ಕಡ್ಡಾಯ).

ತಂದೆ ಅಥವಾ ತಾಯಿ ಹೆಸರಿನಲ್ಲಿ ಜಮೀನು ಇದ್ದು ಅವರು ಮರಣ ಹೊಂದಿದ್ದಲ್ಲಿ ಮಾತ್ರ ಗ್ರಾಮ ಲೆಕ್ಕಿಗರಿಂದ ದೃಢೀಕರಿಸಿ ಕುಟುಂಬದ ಇತರ ಸದಸ್ಯರಿಂದ ಒಪ್ಪಿಗೆ ಪಡೆದು ತಮ್ಮ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು. ಮಹಿಳೆಯ ಹೆಸರಿನಲ್ಲಿ ಖಾತೆ ಹೊಂದಿದ್ದು, ಕುಟುಂಬದ ಇತರೆ ಪುರುಷ ಸದಸ್ಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಿದ್ದಲ್ಲಿ ಯಾವುದೇ ಕಾರಣಕ್ಕೂ ಮಾನ್ಯ ಮಾಡಲಾಗುವುದಿಲ್ಲ. ಜಮೀನು ಯಾರ ಹೆಸರಿನಲ್ಲಿದೇ ಅವರ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಬೇಕು. ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಜೆರಾಕ್ಸ್‌ ಪ್ರತಿ ಲಗತ್ತಿಸಬೇಕು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಲ್‌. ಪ್ರದೀಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT