ತಡಸ (ದುಂಡಶಿ): ದುಂಡಶಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆಯಾಗಿ ಹಸೀನಾಬಾನು ಉಮರಪರೋಖ ಹೊಸೂರ, ಉಪಾಧ್ಯಕ್ಷರಾಗಿ ಮಹಮ್ಮದ ರಫೀಕ್ ಹಜರೇಸಾಬ ಶಿರಗೋಡ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ, ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬೊಬ್ಬರು ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಅವಿರೋಧವಾಗಿ ಆಯ್ಕೆ ನಡೆಯಿತು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಪಿ.ಮುಲ್ಲಾ, ಈರಣ್ಣಾ ಮಹಾಜಶೆಟ್ಟರ, ಗ್ರಾಮಸ್ಥರು ಮಾತನಾಡಿದರು. ಚುನಾವಣಾಧಿಕಾರಿಯಾಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಕ ಅಧಿಕಾರಿ ಪಿ.ವಿಶ್ವನಾಥ ಕರ್ತವ್ಯ ನಿರ್ವಹಿಸಿದರು.