ಹಾವೇರಿ: ಜಿಲ್ಲೆಯ ಹಲವು ಕಡೆಗಳಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸೋಯಾಬೀನ್ ಹಾಗೂ ಶೇಂಗಾ ಬೆಳೆ ಬೆಳೆಯಲಾಗಿದ್ದು, ಬಹುತೇಕ ಕಡೆ ಕಟಾವು ಆರಂಭವಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಶೇಂಗಾ–ಸೋಯಾಬೀನ್ ಖರೀದಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ.

ಹಾವೇರಿ, ಬಂಕಾಪುರ, ಹಾನಗಲ್, ರಾಣೆಬೆನ್ನೂರು, ಸವಣೂರು, ರಟ್ಟೀಹಳ್ಳಿಯಲ್ಲಿರುವ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಗಳಲ್ಲಿ ಹಾಗೂ ಶಿಗ್ಗಾವಿಯ ಮಹಾನಂದಿ ಗ್ರೀನ್ ರೈತರ ಉತ್ಪಾದಕ ಕಂಪನಿಯಲ್ಲಿ ಸೋಯಾಬೀನ್ ಖರೀದಿ ಕೇಂದ್ರ ತೆರೆಯಲು ಸಿದ್ಧತೆ ನಡೆದಿದೆ.

ರಾಣೆಬೆನ್ನೂರು, ಸವಣೂರು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘಗಳಲ್ಲಿ ಹಾಗೂ ಶಿಗ್ಗಾವಿಯ ಮಹಾನಂದಿ ಗ್ರೀನ್ ರೈತರ ಉತ್ಪಾದಕ ಕಂಪನಿ, ಹುಲಗೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಶೇಂಗಾ ಖರೀದಿ ಕೇಂದ್ರ ಆರಂಭಿಸಲು ತಯಾರಿ ಶುರುವಾಗಿದೆ.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯಲ್ಲಿ, ಶೇಂಗಾ ಹಾಗೂ ಸೋಯಾಬೀನ್ ಖರೀದಿ ಕೇಂದ್ರ ಸ್ಥಾಪಿಸುವ ಬಗ್ಗೆ ಚರ್ಚಿಸಲಾಯಿತು.

‘ರೈತರ ಅನುಕೂಲಕ್ಕಾಗಿ ಸರ್ಕಾರ, ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಹಾಗೂ ಸೋಯಾಬೀನ್ ಖರೀದಿಸಲು ನಿರ್ದೇಶನ ನೀಡಿದೆ. ಸರ್ಕಾರದ ಮಾರ್ಗಸೂಚಿಯಂತೆ ಎರಡೂ ಉತ್ಪನ್ನಗಳ ಖರೀದಿಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.

‘ಎಫ್.ಎ.ಕ್ಯೂ ಗುಣಮಟ್ಟದ ಸೋಯಾಬೀನ್ ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ ₹ 5,328 ಹಾಗೂ ಶೇಂಗಾ ಉತ್ಪನ್ನವನ್ನು ಪ್ರತಿ ಕ್ವಿಂಟಲ್ಗೆ ₹ 7263 ಬೆಲೆಗೆ ಖರೀದಿಸಲು ಅವಕಾಶವಿದೆ. ಸರ್ಕಾರದ ಆದೇಶದ ದಿನದಿಂದ 80 ದಿನಗಳ ವರೆಗೆ ಹಾಗೂ ನೋಂದಣಿ ಕಾರ್ಯದ ಜೊತೆಯಲ್ಲಿ ಖರೀದಿ ಅವಧಿಯನ್ನು 90 ದಿನಗಳ ವರೆಗೆ ನಿಗದಿಪಡಿಸಬಹುದು. ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಸಂಸ್ಥೆ ಹಾಗೂ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳದ ಮೂಲಕ ಎರಡೂ ಉತ್ಪನ್ನಗಳನ್ನು ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ’ ಎಂದು ಹೇಳಿದರು.

‘ಬೆಂಬಲ ಬೆಲೆ ಯೋಜನೆಯಡಿ ಸೋಯಾಬೀನ್ ಹಾಗೂ ಶೇಂಗಾ ಉತ್ಪನ್ನ ಖರೀದಿ ಕೇಂದ್ರ ಆರಂಭಿಸಿರುವ ಕುರಿತು ಹೆಚ್ಚಿನ ಪ್ರಚಾರ ಮಾಡಬೇಕು. ಕರಪತ್ರ, ಬ್ಯಾನರ್ ಅಳವಡಿಸುವ ಮೂಲಕ ರೈತರಿಗೆ ಮಾಹಿತಿ ತಲುಪಿಸಬೇಕು. ರೈತರಿಂದ ಖರೀದಿಸಿದ ಉತ್ಪನ್ನವನ್ನು ದಾಸ್ತಾನು ಮಾಡಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಉಗ್ರಾಣಗಳನ್ನು ಕಾಯ್ದಿರಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ರೈತರ ಖಾತೆಗೆ ಹಣ ಜಮೆ: ‘ರೈತರಿಂದ ಸೋಯಾಬೀನ್ ಹಾಗೂ ಶೇಂಗಾ ಉತ್ಪನ್ನ ಖರೀದಿಸಿದ ಮೊತ್ತವನ್ನು, ಅವರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ಡಿಬಿಟಿ (ನೇರ ನಗದು ವರ್ಗಾವಣೆ) ಮೂಲಕ ಹಣ ಜಮೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

‘ಸೋಯಾಬೀನ್ ಹಾಗೂ ಶೇಂಗಾ ಎಫ್.ಎ.ಕ್ಯೂ ಗುಣಮಟ್ಟ ಪರಿಶೀಲನೆಗಾಗಿ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಸಿಬ್ಬಂದಿಯನ್ನು ಕೇಂದ್ರಗಳಲ್ಲಿ ನಿಯೋಜಿಸಬೇಕು. ಪ್ರತಿ ರೈತರಿಂದ ಪ್ರತಿ ಎಕರೆಗೆ ಐದು ಕ್ವಿಂಟಲ್ನಂತೆ ಗರಿಷ್ಠ 20 ಕ್ವಿಂಟಲ್ ಸೋಯಾಬೀನ್ ಖರೀದಿಸಲು ಅವಕಾಶವಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ ಮೂರು ಕ್ವಿಂಟಲ್ನಂತೆ ಗರಿಷ್ಠ 15 ಕ್ವಿಂಟಲ್ ಶೇಂಗಾ ಖರೀದಿಸಲು ಅವಕಾಶವಿದೆ’ ಎಂದು ಹೇಳಿದರು.

ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್, ಸಹಕಾರಿ ಸಂಘಗಳ ಉಪನಿಬಂಧಕರು, ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಶಾಖಾ ವ್ಯವಸ್ಥಾಪಕರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.