ಶುಕ್ರವಾರ, ಸೆಪ್ಟೆಂಬರ್ 17, 2021
23 °C

ಕನಕ ಗುರುಪೀಠದಲ್ಲಿ ‘ಗುರು ಪೂರ್ಣಿಮೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬ್ಯಾಡಗಿ: ತಾಲ್ಲೂಕಿನ ಶ್ರೀ ಕ್ಷೇತ್ರ ಕಾಗಿನೆಲೆ ಕನಕ ಗುರು ಪೀಠದಲ್ಲಿ ಬ್ರಹ್ಮಲೀನ ಜಗದ್ಗುರು ಬೀರೇಂದ್ರ ಕೇಶವ ತಾರಕಾನಂದಪುರಿ ಸ್ವಾಮೀಜಿಗಳ 15ನೇ ವರ್ಷದ ಪುಣ್ಯಾರಾಧನೆ ಹಾಗೂ ಗುರುಪೂರ್ಣಿಮೆ  ಕಾರ್ಯಕ್ರಮ ಶನಿವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ನಿರಂಜನಾಂದಪುರಿ ಸ್ವಾಮೀಜಿಗೆ ಭಕ್ತರು  ಪುಷ್ಪಾರ್ಚನೆ ಮಾಡಿ, ಸನ್ಮಾನಿಸಿದರು. ಬಳಿಕ ಆಶೀರ್ವಚನ ನೀಡಿದ ಸ್ವಾಮೀಜಿ, ನಮ್ಮ ದೇಶದಲ್ಲಿ ಗುರುವನ್ನು ದೇವರ ಸಮಾನವಾಗಿ ಕಾಣಲಾಗುತ್ತದೆ. ತನ್ನಲ್ಲಿರುವ ಅಪಾರ ಜ್ಞಾನವನ್ನು ಧಾರೆ ಎರೆಯುವ ಗುರುವಿಗೆ ಪೂಜ್ಯ ಭಾವನೆಯಿಂದ ನಮಿಸಲಾಗುತ್ತದೆ. ಪ್ರತಿಯೊಂದು ಹಂತದಲ್ಲಿಯೂ ಗುರುವಿನ ಮಾರ್ಗದರ್ಶನ ಅವಶ್ಯವಾಗಿದೆ’ ಎಂದು ಅವರು ಹೇಳಿದರು.

ಬೆಳಿಗ್ಗೆ ರೇವಣಸಿದ್ಧೇಶ್ವರ, ಬೀರಲಿಂಗೇಶ್ವರ, ಮೈಲಾರಲಿಂಗೇಶ್ವರ, ಮಹಾಸಿದ್ಧೇಶ್ವರಿ, ಭಕ್ತ ಕನಕದಾಸರು, ಬ್ರಹ್ಮಲೀನ್ ಜಗದ್ಗುರುಗಳ ರುದ್ರಾಭಿಷೇಕವನ್ನು ನೆರವೇರಿಲಾಯಿತು.

ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕ ಬಸವರಾಜ ಶಿವಣ್ಣನವರ, ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಆರ್.ಪಾಟೀಲ. ಗುರು ಪೀಠದ ಆಡಳಿತಾಧಿಕಾರಿ ಎಸ್‌ಎಫ್‌ಎನ್ ಗಾಜಿಗೌಡ್ರ, ಮುಖಂಡರಾದ ಶಂಕ್ರಣ್ಣ ಮಾತನವರ, ರಾಜೇಂದ್ರ ಹಾವೇರಣ್ಣನವರ, ಕುರುಬರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು