ಮಂಗಳವಾರ, ಸೆಪ್ಟೆಂಬರ್ 21, 2021
21 °C

ಪತಂಜಲಿ ಕೇಂದ್ರದಲ್ಲಿ ಗುರುಪೂರ್ಣಿಮೆ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದ ಉದಯನಗರದ ಹಾವೇರಿ ಜಿಲ್ಲಾ ಮಹಿಳಾ ಪತಂಜಲಿ ಯೋಗ ಕೇಂದ್ರದ ವತಿಯಿಂದ ಗುರು ಪೂರ್ಣಿಮೆ ಕಾರ್ಯಕ್ರಮ ನಡೆಯಿತು. 

ಹಾವೇರಿ ತಾಲ್ಲೂಕು ಪ್ರಭಾರಿ ಪುಷ್ಪಾ ಮೃ. ಸೊಲಬಗೌಡ್ರ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಾವೇರಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಜ್ಯೋತಿ ಜಂಬಗಿ ಹಾಗೂ ರೇಖಾ ರಾಮಾಳದ ಅವರನ್ನು ಉದಯನಗರದ ಗಣೇಶ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು.

ಉದಯನಗರದ ಯೋಗ ಶಿಕ್ಷಕಿ ಪುಷ್ಪಾ ಸೊಲಬಗೌಡ್ರ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಅನುಪಮಾ ವಾಲಿಶೆಟ್ಟರ್, ದೀಪಾ ಹುಬ್ಬಳ್ಳಿ, ಪುಷ್ಪಾ ಎರೆಸೀಮಿ ಹಾಗೂ ಹಲವಾರು ಯೋಗ ಸಾಧಕರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು