ಗುತ್ತಲ: ಪಟ್ಟಣದ ವಾಣಿಜ್ಯ ಮಳಿಗೆಗಳ ತೆರಿಗೆ ಸಂಗ್ರಹಿಸಿ, ಅಭಿವೃದ್ಧಿ ಕಾರ್ಯಗಳಿಗೆ ಬಳಸುವಂತೆ ಹಿಂದಿನ ಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಲಾಗಿತ್ತು. ಆದರೆ ಇದುವರೆಗೂ ಕ್ರಮ ಕೈಗೊಳ್ಳದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು ಶಾಸಕ ರುದ್ರಪ್ಪ ಲಮಾಣಿ ತರಾಟೆಗೆ ತೆಗೆದುಕೊಂಡ ಘಟನೆ ಸೊಮವಾರ ನಡೆದ ಪಟ್ಟಣ ಪಂಚಾಯಿತಿ ಸಭೆಯಲ್ಲಿ ಜರುಗಿತು.

ವಾಣಿಜ್ಯ ಮಳಿಗೆಗಳ ತೆರಿಗೆ ಸಂಗ್ರಹಿಸಿ ಚರಂಡಿ ಸ್ವಚ್ಚ, ಬೀದಿದೀಪ ಅಳವಡಿಕೆ, ಕುಡಿಯುವ ನೀರು ಪೂರೈಕೆ ಸೇರಿದಂತೆ ಪಟ್ಟಣದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಸಿಬ್ಬಂದಿಗಳಿಗೆ ಸೂಚಿಸಿದರು.

ಪಟ್ಟಣದಲ್ಲಿ ಗ್ರಂಥಾಲಯ ನೂತನ ಕಟ್ಟಡ ನಿರ್ಮಾಣ ಸ್ಥಳ ನೀಡಲಾಯಿತು. ಬಸ್ ನಿಲ್ದಾಣದ ವೃತ್ತದಲ್ಲಿ ವಾಹನ ದಟ್ಟನೆಯಿಂದ ಅಪಘಾತಗಳು ಸಂಭವಿಸುತ್ತಿದ್ದು, ಪೊಲೀಸ್ ಸಿಬ್ಬಂದಿ ನೇಮಿಸಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು. ಪಿಎಸ್ಐ ಪರಶುರಾಮ ಲಮಾಣಿ, ಪಟ್ಟಣ ಪಂಚಾಯಿತಿ ಸದಸ್ಯ ಖಲಿಲಹ್ಮದ ಖಾಜಿ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-22-1083600755

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.