ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ರೈತರಿಂದ ಅರೆಬೆತ್ತಲೆ ಮೆರವಣಿಗೆ

Last Updated 28 ಸೆಪ್ಟೆಂಬರ್ 2020, 11:55 IST
ಅಕ್ಷರ ಗಾತ್ರ

ಹಾವೇರಿ: ರೈತ ವಿರೋಧಿ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ‘ಕರ್ನಾಟಕ ಬಂದ್’ ಅಂಗವಾಗಿ ನಗರದಲ್ಲಿ ಸೋಮವಾರ ಅರೆಬೆತ್ತಲೆ ಮೆರವಣಿಗೆ ನಡೆಸಿದರು.

ಮುರುಘಾ ಮಠದಿಂದ ಹೊರಟ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಹೊಸಮನಿ ಸಿದ್ದಪ್ಪ ವೃತ್ತವನ್ನು ತಲುಪಿತು. ಕುತ್ತಿಗೆಗೆ ನೇಣು ಕುಣಿಕೆ ಹಾಕಿಕೊಂಡಿದ್ದ ರೈತರು, ತಿದ್ದುಪಡಿ ಮಸೂದೆಗಳು ರೈತರ ಪಾಲಿಗೆ ಮರಣ ಶಾಸನಗಳಾಗಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರ ಬಂಡವಾಳಶಾಹಿ ಮತ್ತು ಕಾರ್ಪೊರೇಟ್‌ ವಲಯದ ಪರ ನಿಂತು, ರೈತರ ಹಿತವನ್ನು ಬಲಿ ಕೊಡುತ್ತಿದೆ. ಭೂ ಸುಧಾರಣೆ, ಎಪಿಎಂಸಿ ಹಾಗೂ ವಿದ್ಯುತ್‌ ಖಾಸಗೀಕರಣ ತಿದ್ದುಪಡಿ ಕಾಯ್ದೆಗಳಿಂದ ಅನ್ನದಾತರು ಬೀದಿಪಾಲಾಗಲಿದ್ದಾರೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT