ಹಾನಗಲ್: ಬೆಂಕಿ ಅನಾಹುತಕ್ಕೆ ತುತ್ತಾದ ಇಲ್ಲಿನ ಸರ್ಕಾರಿ ತಾಲ್ಲೂಕು ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ್ದ ಶಾಸಕ ಶ್ರೀನಿವಾಸ ಮಾನೆ ಅವರು ಹಾನಿಯ ಪ್ರಮಾಣ ಪರಿಶೀಲಿಸಿದರು.

ಭಾನುವಾರ ಆಕಸ್ಮಿಕವಾಗಿ ಆಸ್ಪತ್ರೆಯ ಔಷಧಿ ದಾಸ್ತಾನು ಕೊಠಡಿಗಳಿಗೆ ಬೆಂಕಿ ತಗುಲಿಕೊಂಡಿತ್ತು. ಅಪಾರ ಪ್ರಮಾಣದಲ್ಲಿ ಔಷಧಿ ಮತ್ತಿತರ ವೈದ್ಯಕೀಯ ಉಪಕರಣಗಳು ಬೆಂಕಿಯಲ್ಲಿ ಸುಟ್ಟು ಹಾಳಾಗಿದ್ದವು. ಈ ಬಗ್ಗೆ ಸ್ಥಳದಲ್ಲಿ ಹಾಜರಿದ್ದ ವೈದ್ಯಾಧಿಕಾರಿಗಳಿಂದ ಶಾಸಕ ಮಾನೆ ಮಾಹಿತಿ ಪಡೆದುಕೊಂಡರು. ಒಂದು ವಾರದ ಒಳಗಾಗಿ ಮತ್ತೆ ಆಸ್ಪತ್ರೆಗೆ ಸೇವೆಗೆ ಸಜ್ಜುಗೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತ ನಾಡಿದರು. ಆಕಸ್ಮಿಕ ಅಗ್ನಿ ಅವಘಡದಿಂದ ಔಷಧ ದಾಸ್ತಾನು ಪೂರ್ಣ ಸುಟ್ಟು ಹೋಗಿದೆ. ಕೆಲ ವೈದ್ಯಕೀಯ ಉಪಕರಣಗಳಿಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದರು.

ಆಸ್ಪತ್ರೆಯ ಸಿಬ್ಬಂದಿ ಮತ್ತು ಸಾರ್ವ ಜನಿಕರು ಸಮಯಪ್ರಜ್ಞೆ ಮೆರೆದು ರೋಗಿಗಳನ್ನು ಸುರಕ್ಷಿತವಾಗಿ ಹೊರಗೆ ಕರೆ ತಂದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಅಕ್ಕಿಆಲೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೇವೆ ನೀಡಲಾಗುತ್ತಿದೆ ಎಂದರು.

ಬ್ಯಾಡಗಿ, ಹಾವೇರಿ, ಶಿಗ್ಗಾಂವಿ ಮತ್ತು ಹುಬ್ಬಳ್ಳಿಯಲ್ಲಿ ಇಲ್ಲಿನ ರೋಗಿಗಳಿಗೆ ಡಯಾಲಿಸಸಗೆ ವ್ಯವಸ್ಥೆ ಮಾಡಲಾಗಿದೆ. ಬುಧವಾರದಿಂದ ತುರ್ತು ಚಿಕಿತ್ಸೆ, ಹೊರ ರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲು ಸೂಚಿಸಲಾಗಿದೆ ಎಂದರು.

ಒಂದು ವಾರದ ನಂತರ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳಲಿದೆ. ಅವಘಡದಲ್ಲಿ ಔಷಧ ದಾಸ್ತಾನು ಹಾಳಾಗಿರುವ ಬಗ್ಗೆ ಆರೋಗ್ಯ ಇಲಾಖೆಯ ಆಯುಕ್ತರ ಜತೆ ಮಾತನಾಡುವುದಾಗಿದ ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಈರಣ್ಣ ಬೈಲವಾಳ, ಇರ್ಫಾನ್ ಇನಾಂದಾರ್, ಇರ್ಫಾನ್ ಮಿಠಾಯಿಗಾರ್, ಖಾಲಿದ್ ಶೇಷಗಿರಿ, ರವಿ ದೇಶಪಾಂಡೆ, ಹನೀಫ್ ಬಂಕಾಪೂರ, ಶಿವು ತಳವಾರ, ಶಿವು ಭದ್ರಾವತಿ, ಅಮಾನ್ ಮೂಡೂರ, ಭರತ್ ಶೇತಸನದಿ, ಮುಸ್ತಫಾ, ಹಾನಗಲ್ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಅಖಿಲೇಶ್ ಮಾಳೋದೆ ಸೇರಿದಂತೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-22-946246517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.