ಹಾನಗಲ್: ತಾಲ್ಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿರುವ ಶಾರದಾ ಜ್ಯುವೆಲರ್ಸ್ ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನವಾಗಿದ್ದು, ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳಿದ್ದ ಲಾಕರ್ ಸಮೇತ ಕಳ್ಳರು ಪರಾರಿಯಾಗಿದ್ದಾರೆ.

‘ಗ್ರಾಮದ ಮುಖ್ಯ ರಸ್ತೆಯಲ್ಲಿ ಅಣ್ಣಪ್ಪ ಭಜಂತ್ರಿ ಎಂಬುವವರು ಶಾರದಾ ಜ್ಯುವೆಲರ್ಸ್ ಚಿನ್ನದ ಅಂಗಡಿ ಇಟ್ಟುಕೊಂಡಿದ್ದಾರೆ. ಅದೇ ಅಂಗಡಿಯಲ್ಲಿ ಮೇ 16ರ ತಡರಾತ್ರಿ ಕಳ್ಳತನವಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಮುಖಗವಸ ಧರಿಸಿಕೊಂಡು ಶಟರ್ ಮುರಿದು ಅಂಗಡಿಗೆ ನುಗ್ಗಿದ್ದ ಕಳ್ಳರು, ಎಲ್ಲ ಕಡೆಯೂ ಹುಡುಕಾಡಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳಕೃತ್ಯವು ಅಂಗಡಿಯಲ್ಲಿದ್ದ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದರು.

‘20 ಕೆ.ಜಿ. ಬೆಳ್ಳಿ ಮತ್ತು 20 ತೊಲೆ ಬಂಗಾರದ ಆಭರಣ ಇಟ್ಟಿದ್ದ ಲಾಕರ್ ಎತ್ತಿಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ₹ 40 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನವಾಗಿರುವುದಾಗಿ ಅಂದಾಜಿಸಲಾಗಿದೆ’ ಎಂದರು.

ಕಳವು ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಎಸ್.ಪಿ. ಯಶೋಧಾ ವಂಟಗೋಡಿ, ಹೆಚ್ಚುವರಿ ಎಸ್.ಪಿ. ಎಲ್.ವೈ. ಶಿರಕೋಳ ಅವರು ಭೇಟಿ ನೀಡಿ ಪರಿಶೀಲಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-22-202124666

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.