ಹಾನಗಲ್: ಪಟ್ಟಣದ ಕನಕ ಉದ್ಯಾನದಲ್ಲಿ ಸ್ಥಾಪಿಸಲಾದ ಕನಕದಾಸರ ಕಂಚಿನ ಪುತ್ಥಳಿ ಅನಾವರಣ ಮೇ 25ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಪವಾಡಿ ತಿಳಿಸಿದರು.

ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಪುತ್ಥಳಿ ಅನಾವರಣ ಮಾಡುವರು. ಹುಬ್ಬಳ್ಳಿ ಮೂರುಸಾವಿರಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು’ ಎಂದು ತಿಳಿಸಿದರು.

ಶಾಸಕ ಶ್ರೀನಿವಾಸ ಮಾನೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಬಸವರಾಜ ಶಿವಣ್ಣನವರ, ಮಾಜಿ ಶಾಸಕ ಶಿವರಾಜ ಸಜ್ಜನರ, ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಅಧ್ಯಕ್ಷ ನಾಗರಾಜ ಅನ್ವೇರಿ, ಉಪಾಧ್ಯಕ್ಷ ದಾನಪ್ಪ ಗಂಟೇರ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಭೋಜರಾಜ ಕರೂದಿ, ತಹಶೀಲ್ದಾರ್ ರೇಣುಕಾ ಎಸ್ ಭಾಗವಹಿಸುವರು ಎಂದು ತಿಳಿಸಿದರು.

ಈ ವೇಳೆ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಕುರುಬ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ದಾನಿಗಳನ್ನು ಸನ್ಮಾನಿಸಲಾಗುವುದು. ಪುತ್ಥಳಿ ಅನಾವರಣ ಅಂಗವಾಗಿ ಇಲ್ಲಿನ ಎನ್ಸಿಜೆಸಿ ಕಾಲೇಜು ಮೈದಾನದಲ್ಲಿ ಮೇ 24ರಂದು ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಮಹೇಶ ಪವಾಡಿ ತಿಳಿಸಿದರು.

ಪ್ರಮುಖರಾದ ಭೋಜರಾಜ ಕರೂದಿ, ದಾನಪ್ಪ ಗಂಟೇರ, ಸುರೇಶ ದೊಡ್ಡಕುರುಬರ, ಮಾಲತೇಶ ಬ್ಯಾಗವಾದಿ, ರಾಮಚಂದ್ರ ಹೆಗಡೆ, ಪ್ರಕಾಶ ತಳ್ಳಳ್ಳಿ, ವಿನಾಯಕ ಕುರುಬರ, ಕೃಷ್ಣ ಮಾಸನಕಟ್ಟಿ, ನಾಗರಾಜ ಕೋಣನಕೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-22-1249501718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.