ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಗಲ್ ಯುವತಿಯ ಅಪಹರಣ: ಆರೋಪಿ ಗೋವಾದಲ್ಲಿ ಬಂಧನ

Published 16 ಜನವರಿ 2024, 16:00 IST
Last Updated 16 ಜನವರಿ 2024, 16:00 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯ ಹಾನಗಲ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಯುವತಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೊಳಗಾದ ಯುವತಿಯನ್ನು ರಕ್ಷಿಸಿ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾನಗಲ್‌ ನ ಕೊಟ್ಟಿಗೇರಿ ಓಣಿಯ ಅಫ್ತಾಬ್‌ ಖತೀಬ್‌ ಬಂಧಿತ ಆರೋಪಿ. ತಮ್ಮ ಮಗಳನ್ನು ಅಪಹರಣ ಮಾಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಮೇಘರಾಜ ಕಲಾಲ ಎಂಬವರು ದೂರು ನೀಡಿದ್ದರು.

ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡ ಪೊಲೀಸರು, ಅಪಹರಣಕ್ಕೊಳಗಾದ ಯುವತಿ ಮತ್ತು ಆರೋಪಿತನ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಲಾಗಿತ್ತು.

ಪಿಎಸ್‌ಐ ಯಲ್ಲಪ್ಪ ಹಿರಗಣ್ಣನವರ ಮತ್ತು ಸಿಬ್ಬಂದಿಯ ತಂಡ ಮಂಗಳವಾರ ಗೋವಾದ ಮಡಗಾಂವ್‌ನಲ್ಲಿ ಯುವತಿ ಮತ್ತು ಆರೋಪಿಯನ್ನು ಪತ್ತೆ ಮಾಡಿ ಕರೆತಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT