ಹಾನಗಲ್: ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಕಚೇರಿ ತೆರೆಯಲು ಅವಕಾಶ ಮಾಡಲಾಗುತ್ತದೆ. ಕಚೇರಿಯ ಪೀಠೋಪಕರಣಗಳ ವ್ಯವಸ್ಥೆಗಾಗಿ ಅನುದಾನ ಬಿಡುಗಡೆಗೊಳ್ಳಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಶುಕ್ರವಾರ ಸಂಜೆ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕಿನ 25 ಜನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದರು.

ಸರ್ಕಾರು ಪ್ರತಿ ಯೋಜನೆಗೆ ಈಗ ದಾಖಲಾತಿಗಳ ಅಗತ್ಯವಿದೆ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ದಾಖಲಾತಿ ಪತ್ರಗಳನ್ನು ಸರಿಯಾಗಿ ಇಟ್ಟುಕೊಳ್ಳವುದು ಅನಿವಾರ್ಯವಾಗಿದೆ. ಸರ್ಕಾರಿ ಸೇವೆಗಳು ಚುರುಕು ಪಡೆಯಬೇಕು. ಇಲಾಖೆಗಳ ವ್ಯವಸ್ಥೆಗಳು ಉತ್ತಮಗೊಳ್ಳಬೇಕು ಎಂಬ ಉದ್ದೇಶದಿಂದ ಸರ್ಕಾರ ಅಗತ್ಯದ ಬದಲಾವಣೆಗಳನ್ನು ತರುತ್ತಿದೆ ಎಂದು ಹೇಳಿದರು.

ಬಗರ್ಹುಕುಂ ಸಮಿತಿ ತಾಲ್ಲೂಕು ಅಧ್ಯಕ್ಷ ಪುಟ್ಟಪ್ಪ ನರೇಗಲ್, ತಹಶೀಲ್ದಾರ್ ರೇಣುಕಾ ಎಸ್, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಜಮಾದಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.