ಹಾನಗಲ್: ‘ರಾಜ್ಯ ಗುರುತಿಸುವ ರೀತಿಯಲ್ಲಿ ಕಲ್ಯಾಣ ಕೆಲಸಗಳು ಮತ್ತು ಕ್ಷೇತ್ರದ ಅಭಿವೃದ್ಧಿಗೆ ತೊಡಗಿಕೊಂಡ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅವರಿಗೆ ಈ ಬಾರಿ ಸಂಪುಟದಲ್ಲಿ ಸ್ಥಾನ ಸಿಗಬೇಕು. ಅವರ ಜನಪರ ಸೇವೆಗಳು ರಾಜ್ಯಕ್ಕೂ ವ್ಯಾಪಿಸಬೇಕು’ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ ಹೇಳಿದರು.

ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಾಸಕ ಮಾನೆ ಅವರಿಗೆ ಸಚಿವ ಸ್ಥಾನ ನೀಡುವಂತೆ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಪಕ್ಷದ ರಾಜ್ಯ ಮತ್ತು ಕೇಂದ್ರ ವರಿಷ್ಠರಿಗೆ ಮನವಿ ಮಾಡಿದ್ದೇವೆ’ ಎಂದು ಹೇಳಿದರು.

‘ಕ್ರಿಯಾಶೀಲ ವ್ಯಕ್ತಿತ್ವದ ಹಾನಗಲ್ ಶಾಸಕರಿಗೆ ಸಚಿವ ಸ್ಥಾನ ನೀಡುವುದರಿಂದ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಹಿತ ಎನ್ನಿಸಲಿದೆ. ಕಳೆದ ವರ್ಷ ನಡೆದ ಶಿಗ್ಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಶಾಸಕ ಮಾನೆ ಅವರ ನೈಪುಣ್ಯತೆ ವ್ಯಕ್ತವಾಗಿದೆ. ಮನೆ ಮಾಲೀಕತ್ವದ ಹಕ್ಕುಪತ್ರ ವಿತರಣೆಯಲ್ಲಿ ಹಾನಗಲ್ ತಾಲ್ಲೂಕು ರಾಜ್ಯದಲ್ಲಿ ಮುಂಚೂಣಿಯಲ್ಲಿರುವುದು ಮಾನೆ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ’ ಎಂದರು.

‘ಯುವ ಕಾಂಗ್ರೆಸ್ ಮೂಲಕ ಪಕ್ಷದಲ್ಲಿ ಅತ್ಯಂತ ಕ್ರಿಯಾಶೀಲ ನಾಯಕರಾಗಿ, ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ಶಾಸಕರಾಗಿ ಆಯ್ಕೆಯಾದ ಶ್ರೀನಿವಾಸ ಮಾನೆ ಅವರು ಪಕ್ಷದ ಹಿತಕ್ಕಾಗಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದಾರೆ. ಹಾವೇರಿ ಜಿಲ್ಲೆ ಬಿಜೆಪಿ ಮುಕ್ತವಾಗುವಲ್ಲಿ ಅತಿ ಹೆಚ್ಚು ಶ್ರಮಪಟ್ಟಿದ್ದಾರೆ’ ಎಂದು ಹೇಳಿದರು.

‘ಹಾವೇರಿ ಜಿಲ್ಲೆಯ ಎಲ್ಲ ವಿಧಾನಸಭೆ ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಹಾವೇರಿ ಜಿಲ್ಲೆ ಬಿಜೆಪಿ ಮುಕ್ತ ಮಾಡಿದ ಈ ಸಂದರ್ಭದಲ್ಲಿ ಹಾವೇರಿ ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ದೊರೆಯಬೇಕು. ಜಿಲ್ಲೆಯಲ್ಲಿ ಅತಿ ಹೆಚ್ಚು ಕ್ರಿಯಾಶೀಲರಾದ ಶ್ರೀನಿವಾಸ ಮಾನೆ ಅವರನ್ನು ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವರಾಗುವ ಅವಕಾಶ ನೀಡಬೇಕು ಎಂದು ಹೈಕಮಾಂಡ್ಗೆ ಮನವಿ ಮಾಡುತ್ತೇವೆ’ ಎಂದರು.

ಪುರಸಭೆ ಮಾಜಿ ಅಧ್ಯಕ್ಷ ಪರಶುರಾಮ ಖಂಡೂನವರ, ಎಪಿಎಂಸಿ ನಿರ್ದೇಶಕ ಗುರುರಾಜ ನಿಂಗೋಜಿ, ಆರಾಧನಾ ಸಮಿತಿ ಸದಸ್ಯ ವಸಂತ ವೆಂಕಟಾಪುರ, ಪುರಸಭೆ ನಾಮ ನಿರ್ದೇಶಿತ ಸದಸ್ಯ ಮೇಕಾಜಿ ಕಲಾಲ, ಸುರೇಶ ನಾಗಣ್ಣನವರ, ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಖಂಡೂಜಿ ಭೋಸ್ಲೆ, ಗ್ಯಾರಂಟಿ ಸಮಿತಿ ಸದಸ್ಯ ಇರ್ಫಾನ್ ಮಿಠಾಯಿಗಾರ, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಖಾಲೀದ್ ಶೇಷಗಿರಿ, ಕೆಡಿಪಿ ಸದಸ್ಯರಾದ ಮಹಮದ್ಹನೀಫ್ ಬಂಕಾಪೂರ, ರಾಜೇಶ್ ಚೌಹಾಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-22-1882932933

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.