ಹಾನಗಲ್: ‘ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸ್ವರೂಪ ಬದಲಿಸಿ ಗ್ರಾಮೀಣಾಭಿವೃದ್ಧಿಗೆ ಧಕ್ಕೆ ತಂದಿದೆ. ಇದರಿಂದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಲ್ಲಿ ಆತಂಕ ಆವರಿಸಿದೆ’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ತಾಲ್ಲೂಕಿನ ಸಾಂವಸಗಿ ಗ್ರಾಮದಲ್ಲಿ ಶುಕ್ರವಾರ ₹72 ಲಕ್ಷ ವೆಚ್ಚದಲ್ಲಿ ಸಿ.ಸಿ ರಸ್ತೆ, ಗಟಾರ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಯೋಜನೆಯ ಸ್ವರೂಪ ಬದಲಿಸಲಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಮುಖಂಡರಾದ ಜಗದೀಶ ಬೆಣ್ಣಿ, ರುದ್ರಪ್ಪ ಬಡಿಗೇರ, ಬಸನಗೌಡ ಪಾಟೀಲ, ಮಹ್ಮದ್ಹನೀಫ್ ಕಾಲೇಬಾಗ, ಗುಡ್ಡಪ್ಪ ಹರಿಜನ, ಹನುಮಂತಪ್ಪ ಈಳಿಗೇರ, ಜಗದೀಶ ಕೊರಗರ, ಫಕ್ಕೀರಪ್ಪ ಬಾಳೂರ, ವಡಕಪ್ಪ ಮಾಸನಕಟ್ಟಿ, ಬಸಪ್ಪ ಭಜಂತ್ರಿ, ಮಹಾಂತೇಶ ಮೂರೂರ, ರಮೇಶ ನಂದಿಕೊಪ್ಪ, ಫಕ್ಕೀರಯ್ಯ ಈಳಿಗೇರ, ಶಂಕ್ರಯ್ಯ ಈಳಿಗೇರ, ಹುತ್ತಯ್ಯ ಈಳಿಗೇರ, ಈರಣ್ಣ ಬೈಲವಾಳ, ಆದರ್ಶ ಶೆಟ್ಟಿ, ಶಿವು ತಳವಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-22-1112158301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.