ಹಾವೇರಿ: ಜಿಲ್ಲೆಯ ಹಾನಗಲ್ ತಹಶೀಲ್ದಾರ್ ರೇಣುಕಮ್ಮ ಸೇರಿದಂತೆ ರಾಜ್ಯದ 27 ತಹಶೀಲ್ದಾರ್ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ತಹಶೀಲ್ದಾರ್ ರೇಣುಕಮ್ಮ ಅವರನ್ನು ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಆಗಿ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಯಾವುದೇ ಅಧಿಕಾರಿಯನ್ನು ವರ್ಗಾಯಿಸಿಲ್ಲ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹಕ್ಕುಪತ್ರ ವಿತರಣೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಹಕ್ಕುಪತ್ರ ವಿತರಿಸಿದ ತಾಲ್ಲೂಕು ಎಂಬ ಖ್ಯಾತಿಗೆ ಹಾನಗಲ್ ಪಾತ್ರವಾಗಿತ್ತು. ಹಾವೇರಿಯಲ್ಲಿ ನಡೆದಿದ್ದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ, ತಹಶೀಲ್ದಾರ್ ರೇಣುಕಮ್ಮ ಅವರಿಗೆ ಸ್ಮರಣಿಕೆ ಸಮೇತ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.