ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ಬಿ.ಸಿ. ಪಾಟೀಲ

Published 20 ಏಪ್ರಿಲ್ 2024, 14:24 IST
Last Updated 20 ಏಪ್ರಿಲ್ 2024, 14:24 IST
ಅಕ್ಷರ ಗಾತ್ರ

ಹಿರೇಕೆರೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ಬಿ.ಸಿ.ಪಾಟೀಲ ನೇತೃತ್ವದಲ್ಲಿ ಶನಿವಾರ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ರಾಜಾರೋಷವಾಗಿ ಇಂತಹ ಕೃತ್ಯ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಕುಸಿದು ಹೋಗಿದೆ. ಇದರಿಂದ ಶಾಲಾ, ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳಲ್ಲಿ ಭಯದ ವಾತವಾರಣ ಉಂಟಾಗುತ್ತಿದೆ ಎಂದು ಆಕ್ರೋಶ ಹೊರಹಾಗಕಿದರು.

ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾಲೇಜಿನಲ್ಲಿಯೂ ರಕ್ಷಣೆಯಿಲ್ಲದಂತಾಗಿದೆ. ಈ ಪ್ರಕರಣವನ್ನು ರಾಜ್ಯಪಾಲರು ಸಿಬಿಐಗೆ ಹಸ್ತಾಂತರಿಸಬೇಕು. ಸೂಕ್ತ ತನಿಖೆ ನಡೆಸಿ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

ಎಸ್.ಎಸ್.ಪಾಟೀಲ, ರವಿಶಂಕರ ಬಾಳಿಕಾಯಿ, ಎನ್.ಎಂ.ಈಟೇರ್ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಜಗದೀಶ ದೊಡ್ಡಗೌಡ್ರ, ಗೀತಾ ದಂಡಗೀಹಳ್ಳಿ, ಬಿ.ಟಿ.ಚಿಂದಿ, ರಮೇಶ ತೋರಣಗಟ್ಟಿ, ಮಂಜುಳಾ ಬಾಳಿಕಾಯಿ, ಬಸಮ್ಮ ಅಬಲೂರು, ಸಿಇಎಸ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಬೇಡ ಜಂಗಮ ಕ್ಷೇಮಾಭಿವೃದ್ದಿ ಸಂಘ: ಹಿರೇಕೆರೂರು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಹಿರೇಕೆರೂರು ತಾಲ್ಲೂಕು ಬೇಡ ಜಂಗಮ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ತಾಲ್ಲೂಕು ಬೇಡ ಜಂಗಮ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಕರಬಸಯ್ಯ ಬಸರೀಹಳ್ಳಿಮಠ, ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ, ನಾಗಯ್ಯ ನರಗುಂದಮಠ, ಚನ್ನೇಶಶಾಸ್ತ್ರಿ ಮಠದ, ಎಂ.ಸಿ.ಮಠದ, ಧನಂಜಯ ಹಿರೇಮಠ, ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT