ಹಾನಗಲ್: ಇಲ್ಲಿನ ಗಂಗಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಗಂಗಾ ಪರಮೇಶ್ವರಿ ಸಮುದಾಯ ಭವನದ ಕಟ್ಟಡ ಉದ್ಘಾಟನೆ ಮೇ 8 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಗಂಗಾಮತ ಸಮಾಜ ಸೇವಾ ಸಂಸ್ಥೆಯ ಅಧ್ಯಕ್ಷ ಅನಂತವಿಕಾಸ ನಿಂಗೋಜಿ ಹೇಳಿದರು.

ವಿವಿಧ ಇಲಾಖೆಗಳ ಅನುದಾನ ಮತ್ತು ಸಮುದಾಯದ ಸಹಭಾಗಿತ್ವದಲ್ಲಿ ಸುಮಾರು ₹2 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಗೊಂಡಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹಲವು ವರ್ಷಗಳ ಪ್ರಯತ್ನದ ಬಳಿಕ ಸಮುದಾಯ ಭವನ ಸಮಾಜಕ್ಕೆ ಅರ್ಪಣೆಗೊಳ್ಳುತ್ತಿದೆ ಎಂದು ತಿಳಿಸಿದರು.

ಚಂದ್ರಾಬಾಯಿ ಮಲಗುಂದ ಅವರು 15 ಗುಂಟೆ ಮತ್ತು ಶಿವಪುತ್ರಪ್ಪ ಶೇಷಗಿರಿ ಅವರು 3 ಗುಂಟೆ ಜಾಗೆ ದಾನ ನೀಡಿದ್ದರು. ಒಟ್ಟು 18 ಗುಂಟೆಯಲ್ಲಿ ನಿರ್ಮಾಣಗೊಂಡ ಸಮುದಾಯ ಭವನವನ್ನು ವಿವಿಧ ಕಾರ್ಯಗಳಿಗೆ ಬಳಸಿಕೊಂಡು ಅದರಿಂದ ಬರುವ ಆದಾಯದಲ್ಲಿ ಸಮಾಜದ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಅನುಕೂಲತೆ ಮಾಡುವ ಯೋಚನೆ ಇದೆ ಎಂದು ಹೇಳಿದರು.

ಹುಬ್ಬಳ್ಳಿ ಮೂರುಸಾವಿರಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಶುಕ್ರವಾರ ಬೆಳಿಗ್ಗೆ ಕಟ್ಟಡ ಉದ್ಘಾಟನೆಗೊಳ್ಳಲಿದೆ. ಶಾಸಕ ಶ್ರೀನಿವಾಸ ಮಾನೆ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ, ಸದಸ್ಯ ಪ್ರದೀಪ ಶೆಟ್ಟರ, ಮಾಜಿ ಸಚಿವ ಪ್ರಮೋದ ಮದ್ವರಾಜ್ ಮತ್ತು ವಿವಿಧ ಜನಪ್ರತಿನಿಧಿಗಳು, ಗಣ್ಯರು ಭಾಗವಹಿಸುತ್ತಾರೆ ಎಂದು ನಿಂಗೋಜಿ ಹೇಳಿದರು.

ಸಮಾಜದ ಪ್ರಮುಖರಾದ ಅಶೋಕ ಆರೆಗೊಪ್ಪ, ಭಾಸ್ಕರ ಹುಲಮನಿ, ಮೈಲಾರಪ್ಪ ಶೇಷಗಿರಿ, ಸುರೇಶ ಪೂಜಾರ, ರವಿರಾಜ್ ಹುಲ್ಲಕ್ಕನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-22-170065980

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.