ಹಾನಗಲ್: ಹಾನಗಲ್ ಮತ್ತು ಹಾವೇರಿ ರಸ್ತೆಯ ತಗ್ಗುಗಳನ್ನು ಮುಚ್ಚುವ ತೇಪೆ ಕಾಮಗಾರಿ ಶನಿವಾರದಿಂದ ಆರಂಭಗೊಂಡಿದೆ.

ಸಾಗರಮಾಲಾ ಯೋಜನೆ ಅಡಿಯಲ್ಲಿ ಹಾನಗಲ್ನ ನಾಲ್ಕರ್ ಕ್ರಾಸ್ನಿಂದ ಹಾವೇರಿ ರಾಷ್ಟ್ರೀಯ ಹೆದ್ದಾರಿವರೆಗೆ ರಸ್ತೆ ಸುಧಾರಣೆ ಕಾಮಗಾರಿ ಕೈಗೊಳ್ಳಲಾಗಿತ್ತು. ಆದರೆ ಈ ರಸ್ತೆಯ ಕೆಲವು ಸ್ಥಳಗಳಲ್ಲಿ ಡಾಂಬರ್ ಹೀಚಿಕೊಂಡು ತಗ್ಗು ಮತ್ತು ಉಬ್ಬು ಉಂಟಾಗಿದ್ದವು. ಇದು ಅವೈಜ್ಞಾನಿಕ ಕಾಮಗಾರಿಗೆ ನಿದರ್ಶನವಾಗಿತ್ತು.

ರಸ್ತೆ ಸುಧಾರಣೆ ಕಾಮಗಾರಿ ಪೂರ್ಣಗೊಂಡ ಕೆಲವೇ ದಿನಗಳಲ್ಲಿ ಅಪಘಾತಕ್ಕೆ ಆಹ್ವಾನ ನೀಡುವ ಸ್ಥಿತಿಯಿತ್ತು. ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಗುತ್ತಿಗೆದಾರರಿಗೆ ಸೂಚನೆ ನೀಡಿದ್ದು, ಕಾಮಗಾರಿ ಆರಂಭವಾಗಿದೆ.

ಈ ಕುರಿತು ಈಚೆಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-22-319060441

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.