ಹಾನಗಲ್: ಹಾನಗಲ್-ಹಾವೇರಿ ರಸ್ತೆಯಲ್ಲಿ ಉಂಟಾಗಿರುವ ಗುಂಡಿಗಳನ್ನು ಮುಚ್ಚಲು ಕಾಮಗಾರಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶನಿವಾರ ತಾಲ್ಲೂಕಿನ ಅಕ್ಕಿಆಲೂರಿನಲ್ಲಿ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಮನಗೌಡ ಪಾಟೀಲ ನೇತೃತ್ವದಲ್ಲಿ ಕೆಲ ಹೊತ್ತು ಹಾವೇರಿ-ಶಿರಸಿ ರಸ್ತೆ ತಡೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಸ್ಥಳಕ್ಕೆ ಆಗಮಿಸಿದ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿ ವಿನಾಯಕ ಸೆಂಟಿಕ್ ಅವರಿಗೆ ಮನವಿ ಸಲ್ಲಿಸಲಾಯಿತು. ರಸ್ತೆಯಲ್ಲಿ ಅಲ್ಲಲ್ಲಿ ಸೃಷ್ಟಿಯಾಗಿರುವ ಗುಂಡಿಗಳು ಪ್ರಯಾಣಿಕರಿಗೆ ಘಾತಕವಾಗಿ ಪರಿಣಮಿಸುತ್ತಿವೆ. 6 ತಿಂಗಳಿನಿಂದ ಇದೇ ಸ್ಥಿತಿ ಇದೆ. ತಗ್ಗುಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ 15 ದಿನಗಳಲ್ಲಿ ಮತ್ತೆ ರಸ್ತೆ ತಡೆ ನಡೆಸಿ ಪ್ರತಿಭಟನೆ ತೀವ್ರಗೊಳಿಸಲಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

‘ಹಾನಗಲ್-ಹಾವೇರಿ ರಸ್ತೆಯಲ್ಲಿ ಪದೇ ಪದೇ ಅಪಘಾತ ಆಗುತ್ತಿವೆ. ಈ ರಸ್ತೆಯಲ್ಲಿನ ಅವಾಂತರಗಳ ಬಗ್ಗೆ ಸಾಕಷ್ಟು ಬಾರಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಆದರೆ ಪ್ರಯೋಜನವಾಗಿಲ್ಲ’ ಎಂದು ರಾಮನಗೌಡ ಪಾಟೀಲ ಆರೋಪಿಸಿದರು.

‘ಅಕ್ಕಿಆಲೂರ ಬಸ್ ನಿಲ್ದಾಣ ಸಮೀಪ ರಸ್ತೆಯಲ್ಲಿ ಮಳೆ ನೀರು ಸಂಗ್ರಹಗೊಳ್ಳುತ್ತದೆ. ಮಳೆಗಾಲದಲ್ಲಿ ಇಲ್ಲಿನ ವ್ಯಾಪಾರಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಸಂಚಾರಕ್ಕೆ ಈ ಅವಾಂತರ ತೊಡಕಾಗುತ್ತಿದೆ. ಇಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಬೇಕು’ ಎಂದು ಒತ್ತಾಯಿಸಿದರು. ಜೆಡಿಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಮೂಕಪ್ಪ ಪಡೆಪ್ಪನವರ, ಅಲ್ಪಸಂಖ್ಯಾತ ಘಟಕದ ತಾಲ್ಲೂಕು ಅಧ್ಯಕ್ಷ ಸಲೀಂ ಸಮನಳ್ಳಿ, ಮುಖಂಡರಾದ ಮುತ್ತಪ್ಪ ಪವಾಡಿ, ಸೋಮಪ್ಪ ನೀರಲಗಿ, ಬಸವರಾಜ ಬಾಳೀಹಳ್ಳಿ, ರಾಜು ತಳವಾರ, ಗೌಸ್ಮೊದ್ದೀನ್ ಆಲದಕಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-22-1142621700

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.