ಹಾನಗಲ್ (ಹಾವೇರಿ ಜಿಲ್ಲೆ): ‘ಅತಿಕ್ರಮಣ, ಒತ್ತುವರಿ ಪ್ರವೃತ್ತಿಯ ಪರಿಣಾಮವಾಗಿ ಸಾಕಷ್ಟು ಸಂಕಷ್ಟಗಳು ಉಂಟಾಗುತ್ತಿದ್ದು, ಕೆರೆ, ಕಟ್ಟೆಯಂತಹ ಜಲಮೂಲಗಳ ಸಂರಕ್ಷಣೆ ನಮ್ಮ ಆದ್ಯತೆಯಾಗಬೇಕು’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹ 20 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಗೊಂಡ ತಾಲ್ಲೂಕಿನ ಹುಣಸಿಕಟ್ಟಿ ಗ್ರಾಮದ ಚುಂಚಲಕಟ್ಟಿ ಕೆರೆಗೆ ಶುಕ್ರವಾರ ನಡೆದ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ನೀರಿಲ್ಲದ ಬದುಕನ್ನು ಊಹಿ ಸುವುದೂ ಅಸಾಧ್ಯ. ಹಾಗಾಗಿ ಜೀವ ಜಲದ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕಿದೆ’ ಎಂದು ಅವರು ಹೇಳಿದರು.

ತಾಲ್ಲೂಕು ಧರ್ಮಧ್ವಜ ಅಭಿಯಾನದ ರೂವಾರಿ ಸಿದ್ಧಲಿಂಗಪ್ಪ ಕಮಡೊಳ್ಳಿ ಮಾತನಾಡಿ, ‘ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡವರನ್ನು ಸಮಾಜ ಗುರುತಿಸುತ್ತದೆ. ಇದಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವೇ ಮಾದರಿ. ಕೆರೆಗಳ ಅಭಿವೃದ್ಧಿ ಮಾಡುವುದು ಪುಣ್ಯದ ಕಾರ್ಯ. ಈ ಭಾಗದ ಪ್ರಮುಖ ಕೆರೆಯ ಅಭಿವೃದ್ಧಿಯನ್ನು ನಿಗದಿತ ಅವಧಿಯಲ್ಲಿ ಅಚ್ಚುಕಟ್ಟಾಗಿ ಪೂರ್ಣಗೊಳಿಸಲಾಗಿದೆ’ ಎಂದು ತಿಳಿಸಿದರು.

ಧರ್ಮಸ್ಥಳ ಯೋಜನೆಯ ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಮಾತನಾಡಿ, ‘ರಾಜ್ಯದಲ್ಲಿ 997 ಕೆರೆಗಳನ್ನು ಹೂಳೆತ್ತಿ ಜೀರ್ಣೋದ್ಧಾರಗೊಳಿಸಲಾಗಿದೆ. ಈ ಪೈಕಿ ಹಾವೇರಿ ಜಿಲ್ಲೆಯಲ್ಲಿ ಅತಿ ಹೆಚ್ಚು ಒಟ್ಟು 48 ಕೆರೆಗಳನ್ನು ಸಂರಕ್ಷಿಸಲಾಗಿದೆ’ ಎಂದು ಹೇಳಿದರು.

ತಾಲ್ಲೂಕು ಯೋಜನಾಧಿಕಾರಿ ರಘುರಾಮ್ ನಾಯ್ಕ, ಮುಖಂಡ ರಾಮು ಯಳ್ಳೂರ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ವಾಸುದೇವ ಮೂಡಿ, ನಾರಾಯಣ ಬಿ, ಪಿಡಿಒ ರಾಮಣ್ಣ ಹನಕನಹಳ್ಳಿ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಶ ಕುಲಕರ್ಣಿ, ಸದಸ್ಯ ಗಂಗಾಧರ ಪ್ಯಾಟಿ, ರವಿ ಮ್ಯಾಗೇರಿ, ಕೆ.ಎಸ್. ಕೋರಿಶೆಟ್ಟರ, ನಿಂಗರಾಜ ಮಾಳವಾಡ, ಮುಖಂಡರು, ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-23-1762862862

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.