ಹಾನಗಲ್: ಪುರಸಭೆ ವ್ಯಾಪ್ತಿಯಲ್ಲಿ ಕೆಲ ವಸತಿ ಫಲಾನುಭವಿಗಳಿಗೆ ಈ ಹಿಂದೆ ನೀಡಿರುವ ಹಕ್ಕುಪತ್ರಗಳಲ್ಲಿ ಹೆಸರು ವ್ಯತ್ಯಾಸವಾಗಿದ್ದು, ಪರಿಶೀಲಿಸಿ ಪರಿಷ್ಕೃತ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳುವಂತೆ ಮುಖ್ಯಾಧಿಕಾರಿ ವೈ.ಕೆ.ಜಗದೀಶ್ ಅವರಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.

ಇಲ್ಲಿನ ಪುರಸಭೆಯಲ್ಲಿ ಸೋಮವಾರ ಆಶ್ರಯ ಸಮಿತಿ ಸಭೆ ನಡೆಸಿದ ಅವರು, ‘ನಿವೇಶನ ಹಂಚಿಕೆಗೆ ಕಾಯ್ದಿರಿಸಿದ ಜಾಗದಲ್ಲಿ ನಿವೇಶನ ರಹಿತರಿಗೆ ಹಂಚಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ಬೇಗ ಪ್ರಸ್ತಾವನೆಗೆ ಮಂಜೂರಾತಿ ಪಡೆದು ಅರ್ಹರಿಗೆ ನಿವೇಶನ ಹಂಚಲು ಕ್ರಮ ಕೈಗೊಳ್ಳಬೇಕು’ ಎಂದರು.

ಈಗಾಗಲೇ ಪುರಸಭೆಯ ಮೂಲ ನಿವೇಶನಗಳ ಹರಾಜಿನಿಂದ ₹1.5 ಕೋಟಿ ಸಂಗ್ರಹವಾಗಿದ್ದು, ಅದನ್ನು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲು ಮೀಸಲಿಡಬೇಕು. ಇನ್ನುಳಿದ ನಿವೇಶನಗಳನ್ನು ಹರಾಜು ಮಾಡಿ ಆದಾಯ ಸಂಗ್ರಹಿಸಿಕೊಳ್ಳುವಂತೆ ಸೂಚಿಸಿದರು.

ಇ–ಸ್ವತ್ತು ವಿಳಂಬವಾಗುತ್ತಿರುವ ಬಗ್ಗೆ ದೂರು ಕೇಳಿ ಬರುತ್ತಲೇ ಇವೆ. ತಾಂತ್ರಿಕ ಲೋಪದೋಷ ಸರಿಪಡಿಸಿ ಸಾರ್ವಜನಿಕರಿಗೆ ಅನಾನುಕೂಲ ಉಂಟಾಗದಂತೆ ಕ್ರಮ ವಹಿಸುವಂತೆ ಶಾಸಕ ಮಾನೆ ಸೂಚಿಸಿದರು. ಆಶ್ರಯ ಸಮಿತಿ ಸದಸ್ಯರಾದ ಮಾಲತೇಶ ಕಾಳೇರ, ನಿಯಾಜ್ ಅಹ್ಮದ್ ಸರ್ವಿಕೇರಿ, ಮೇಘಾ ಸುಲಾಖೆ, ವಿನಾಯಕ ಬಂಕನಾಳ ಸೇರಿದಂತೆ ಪುರಸಭೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-22-1527164320

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.