ಹಾನಗಲ್: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನವನಗರದಲ್ಲಿ ಕೊಳಚೆ ಅಭಿವೃದ್ಧಿ ಮಂಡಳಿಯಿಂದ ರಸ್ತೆಗಳ ನಿರ್ಮಾಣ ಕಾಮಗಾರಿಗೆ ₹1 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಶನಿವಾರ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿದರು.

ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ‘ಸ್ಥಳೀಯ ಪುರಸಭೆಗೆ ಮೊದಲ ಬಾರಿಗೆ ದಾಖಲೆ ಪ್ರಮಾಣದ ಅನುದಾನ ಒದಗಿಸಲಾಗಿದೆ. ₹38 ಕೋಟಿ ವೆಚ್ಚದಲ್ಲಿ ಧರ್ಮಾ ಜಲಾಶಯದಿಂದ ಪೈಪ್ಲೈನ್ ಮೂಲಕ ನೀರು ತರುವ ಕಾಮಗಾರಿ, ನಗರೋತ್ಥಾನ ಯೋಜನೆಯಡಿ ₹6.50 ಕೋಟಿ ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ, ₹5.50 ಕೋಟಿ ಅನುದಾನದಲ್ಲಿ ವಿವಿಧ ಬಡಾವಣೆಗಳಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಚರಂಡಿ ನೀರು ನದಿ ಮತ್ತು ಕೆರೆಗಳಿಗೆ ಹರಿಯದಂತೆ ತಡೆಯುವ ಕಾಮಗಾರಿಗೆ ₹5 ಕೋಟಿ ಬಿಡುಗಡೆಯಾಗಿದೆ’ ಎಂದು ತಿಳಿಸಿದರು.

ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷರಾದ ಖುರ್ಷಿದ್ ಹುಲ್ಲತ್ತಿ, ಮಮತಾ ಆರೆಗೊಪ್ಪ, ಮುಖ್ಯಾಧಿಕಾರಿ ವೈ.ಕೆ. ಜಗದೀಶ, ಮುಖಂಡರಾದ ಮತೀನ್ ಶಿರಬಡಗಿ, ಉಮೇಶ ಮಾಳಗಿ, ಶ್ರೀನಿವಾಸ ಭದ್ರಾವತಿ, ಸಿಕಂದರ್ ವಾಲಿಕಾರ, ವಿರುಪಾಕ್ಷಪ್ಪ ಕಡಬಗೇರಿ, ಗುರುರಾಜ್ ನಿಂಗೋಜಿ, ರವಿ ದೇಶಪಾಂಡೆ, ಇರ್ಫಾನ್ ಮಿಠಾಯಿಗಾರ, ಶಿವು ಭದ್ರಾವತಿ, ರಾಜಕುಮಾರ ಶಿರಪಂಥಿ, ಶಂಶಿಯಾ ಬಾಳೂರ, ಮುನ್ನಾ ನಾಯ್ಕ, ಮೌನೇಶ ಕಲಾಲ, ಸುರೇಶ ನಾಗಣ್ಣನವರ, ಬಾಬಾಜಾನ ಕೊಂಡೇವಾಡೆ, ನಿಯಾಜ್ ಸರ್ವಿಕೇರಿ, ಜಾಫರ್ ಬಾಳೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-22-1097018123

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.