ಹಾನಗಲ್: ತಾಲ್ಲೂಕಿನ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಮತ್ತು ಅಗತ್ಯದ ಸಿಬ್ಬಂದಿ ಕೊತೆ ಇದೆ ಎಂದು ಜಿಲ್ಲಾ ಆರೋಗ್ಯ ಅಭಿಯಾನ ಸಮಿತಿ ಅಧ್ಯಕ್ಷ ಬಸವರಾಜ ಕೊತಂಬರಿ ಹೇಳಿದರು. ಇಲ್ಲಿನ ರೋಶನಿ ಸಮಾಜ ಸೇವಾ ಸಂಸ್ಥೆಯಲ್ಲಿ ಸೋಮವಾರ ‘ನಮ್ಮ ಆರೋಗ್ಯ ನಮ್ಮ ಹಕ್ಕು’ ಅಭಿಯಾನದ ಅಂಗವಾಗಿ ನಡೆದ ಆರೋಗ್ಯ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಲದಕಟ್ಟಿ, ಬಮ್ಮನಹಳ್ಳಿ, ತಿಳವಳ್ಳಿ, ಅಕ್ಕಿಆಲೂರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಮ್ಮ ಸಮಿತಿ ಭೇಟಿ ನೀಡಿ ಪರಿಶೀಲಿಸಿದೆ. ವೈದ್ಯರು ಮತ್ತು ಅಗತ್ಯದ ಸಿಬ್ಬಂದಿ ಕೊರತೆ ಕಾರಣಕ್ಕಾಗಿ ಗ್ರಾಮೀಣರು ಆರೋಗ್ಯ ಸೇವೆಗಳಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜಾ ಅವರು ಕಾರ್ಯಾಗಾರಕ್ಕೆ ಚಾಲನೆ ನೀಡಿ, ‘ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ಆರೋಗ್ಯ ನಮ್ಮ ಹಕ್ಕು ಅಭಿಯಾನ ಆಯೋಜಿಸಲಾಗಿದೆ’ ಎಂದು ಹೇಳಿದರು.

ತಾಲ್ಲೂಕು ಪ್ರಗತಿಪರ ಸಂಘಟನೆಯ ಅಧ್ಯಕ್ಷ ಎನ್.ಎಂ.ಪೂಜಾರ, ಗ್ರಾಮೀಣ ಭಾಗದಲ್ಲಿ ಸರ್ಕಾರ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಿದಾಗ ಖಾಸಗಿ ಆಸ್ಪತ್ರೆ ಆಶ್ರಯಿಸುವುದು ತಪ್ಪಲಿದೆ. ಇದರಿಂದ ಕುಟುಂಬಗಳು ಆರ್ಥಿಕವಾಗಿ ಸಭಲವಾಗುತ್ತವೆ ಎಂದರು.

ಆರೋಗ್ಯ ಇಲಾಖೆಯ ಎಲ್.ಜಿ.ಕೊಣ್ಣೂರ, ಬಸವರಾಜ ಕಡಕೋಳ ತರಬೇತಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು.

ಪ್ರಗತಿಪರ ಸಂಘಟನೆಯ ಡಾ.ಎನ್.ಎಂ.ಕಮ್ಮಾರ, ಅಶೋಕ ದಾಸರ, ಚೈತ್ರಾ ಕಂಬಾಳಿಮಠ, ಫೈರೋಜ್ ಶಿರಬಡಗಿ, ಮಹಲಿಂಗಪ್ಪ ಅಕ್ಕಿವಳ್ಳಿ, ಆರ್.ಪಿ.ತಿರುಮಲೆ, ರಾಮಚಂದ್ರ ಕಲ್ಲೇರ, ಜನವೇದಿಕೆ ಮುಖಂಡರಾದ ಲಕ್ಷ್ಮವ್ವ ಲಮಾಣಿ, ಲೋಕವ್ವ ಲಮಾಣಿ, ಮಂಜುನಾಥ ಕುದರಿ, ಮುನೀರ್ಅಹ್ಮದ್ ಗೊಂದಿ, ರಾಮಚಂದ್ರ ಶಿಡ್ಲಾಪೂರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-22-500174951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.