ಹಾನಗಲ್ (ಹಾವೇರಿ ಜಿಲ್ಲೆ); ಇಲ್ಲಿನ ತಾಲ್ಲೂಕು ಆಸ್ಪತ್ರೆಯ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಔಷಧಿ ಸಾಮಗ್ರಿಗಳು ಸುಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕೀಟ್ ಕಾರಣ ಎಂದು ಹೇಳಲಾಗಿದೆ.

ಹಾನಗಲ್ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸುಮಾರು ಎರಡು ತಾಸು ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ.

ಸುಮಾರು ₹ 40 ಲಕ್ಷ ಮೌಲ್ಯದ ಔಷಧಿ , ಮಾತ್ರೆಗಳು ಹಾಗೂ ₹ 50 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳು ಸೇರಿದಂತೆ ಸುಮಾರು ₹1 ಕೋಟಿ ಮೊತ್ತದಷ್ಟು ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ.

ಆಸ್ಪತ್ರೆ ಎರಡನೇ ಮಹಡಿಯಲ್ಲಿ ಔಷಧ ಮತ್ತು ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು. ಈ ಭಾಗದಲ್ಲಿ ಬೆಂಕಿ ಹತ್ತಿಕೊಂಡಿತ್ತು.

ಮೊದಲಿಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಆಸ್ಪತ್ರೆ ಸಿಬ್ಬಂದಿ ಒಳ ರೋಗಿಗಳನ್ನು ಸುರಕ್ಷಿತವಾಗಿ ಹೊರಗೆ ಕಳಿಸಿದ್ದಾರೆ. ಔಷಧಿ ವಿಭಾಗದ ಪಕ್ಕದಲ್ಲಿ ಸಂಗ್ರಹಿತ ಆಕ್ಸಿಜನ್ ಸಿಲಿಂಡರ್ ಗಳನ್ನು ತೆರವು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.