ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Haveri Accident | ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ: 13 ಜನ ದುರ್ಮರಣ

Published 28 ಜೂನ್ 2024, 3:05 IST
Last Updated 28 ಜೂನ್ 2024, 3:05 IST
ಅಕ್ಷರ ಗಾತ್ರ

ಹಾವೇರಿ: ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಸುಕಿನಲ್ಲಿ ಅಪಘಾತ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದಾರೆ.

ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳು ಜನ ಮಹಿಳೆಯರು, ಒಂದು ಮಗು, ಅಜ್ಜಿ, ಓರ್ವ ಅಂಗವಿಕಲ ಯುವತಿ ಮೃತಪಟ್ಟಿದ್ದಾರೆ. ಶವಗಳನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಅಪಘಾತ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ 108 ವಾಹನದ ಸಿಬ್ಬಂದಿ, ಟಿಟಿ ವಾಹನದಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಿ ಅವರಿಗೆ ಚಿಕಿತ್ಸೆ ‌‌ನೀಡಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬಳಿಯ ಎಮ್ಮೆ ಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ.

ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಚಿಂಚಲಿ ಮಾಯಮ್ಮ ದೇವಿ ದರ್ಶನ ಮುಗಿಸಿಕೊಂಡ ನಂತರ ಎಲ್ಲಮ್ಮನಗುಡ್ಡಕ್ಕೆ ತೆರಳಿ ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಂಶುಕುಮಾರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ‌ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT