ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಬಿವಿಪಿ ರಾಜ್ಯ ಕಾರ್ಯಕಾರಣಿ ಸಭೆ ಉದ್ಘಾಟನೆ

Published : 28 ಸೆಪ್ಟೆಂಬರ್ 2024, 15:48 IST
Last Updated : 28 ಸೆಪ್ಟೆಂಬರ್ 2024, 15:48 IST
ಫಾಲೋ ಮಾಡಿ
Comments

ಹಾವೇರಿ: ನಗರದ ಸಿದ್ಧರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಆಯೋಜಿಸಿರುವ ಎರಡು ದಿನಗಳ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯಕಾರಣಿ ಸಭೆಯನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಅವರು ಶನಿವಾರ ಉದ್ಘಾಟಿಸಿದರು.

ಉದ್ಘಾಟನಾ ಬಳಿಕ ಮಾತನಾಡಿದ ಬಾಲಕೃಷ್ಣ, ‘ಎಬಿವಿಪಿ, ಕಳೆದ 76 ವರ್ಷಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವುದರ ಮೂಲಕ ದೇಶ ಕಟ್ಟುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ’ ಎಂದರು.

‘ಭಾರತದ ಬಗ್ಗೆ ವಿದೇಶಿಗರು ಈ ಹಿಂದೆ ಮಾತನಾಡುತ್ತಿದ್ದ ಶೈಲಿ ಹಾಗೂ ಇಂದಿನ ಭಾರತದ ಬಗ್ಗೆ ಮಾತನಾಡುತ್ತಿರುವ ಶೈಲಿ ಸಂಪೂರ್ಣ ಬದಲಾಗಿವೆ. ಜಗತ್ತಿನಲ್ಲಿ ಭಾರತದ ಗೌರವ ಹೆಚ್ಚುತ್ತಿದೆ’ ಎಂದರು.

ರಾಜ್ಯ ಘಟಕದ ಕಾರ್ಯದರ್ಶಿ ಸಚಿನ ಕುಳಗೇರಿ, ‘ವಿದ್ಯಾರ್ಥಿ ಸಮುದಾಯಕ್ಕೆ ಅನ್ಯಾಯವಾದಾಗ ಮೊದಲು ನೆನಪಿಗೆ ಬರುವುದು ಎಬಿವಿಪಿ. ವಸತಿ ನಿಲಯ, ಬಸ್, ಸರ್ಕಾರಿ ಕಾಲೇಜುಗಳ ಸಮಸ್ಯೆ, ವಿದ್ಯಾರ್ಥಿ ವೇತನ ಸಮಸ್ಯೆಗಳ ಕುರಿತು ನಿರಂತರವಾಗಿ ಹೋರಾಟ ಮಾಡುವ ಅಗತ್ಯವಿದೆ’ ಎಂದು ಹೇಳಿದರು.

ರಾಜ್ಯ ಘಟಕದ ಉಪಾಧ್ಯಕ್ಷ ವಿನಾಯಕ ಸಿಂಗ ರಜಪೂತ, ದಕ್ಷಿಣ ಮಧ್ಯ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ ಶಿವುಕುಮಾರ, ಗಂಗಾಧರ ಹಂಜಗಿ ಇದ್ದರು.

ಎರಡು ದಿನಗಳ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT