ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Haveri Accident | ಅಪಘಾತ: ಪರಿಹಾರ ಹಾಗೂ ಸೂಕ್ತ‌ ಚಿಕಿತ್ಸೆಗೆ ಸಂಸದ ಆಗ್ರಹ

Published 28 ಜೂನ್ 2024, 5:39 IST
Last Updated 28 ಜೂನ್ 2024, 5:39 IST
ಅಕ್ಷರ ಗಾತ್ರ

ಹಾವೇರಿ: 'ಇಂದು ನಸುಕಿನಲ್ಲಿ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಗುಂಡೇನಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ' ಎಂದು ಸಂಸದ ಬಸವರಾಜ ಬೊಮ್ಮಾಯಿ ವಿಷಾದ ವ್ಯಕ್ತಪಡಿಸಿದ್ದಾರೆ.

ಈ‌ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಪ್ರಕಟಿಸಿರುವ ಅವರು, 'ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದಿದ್ದಾರೆ.

'ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪತಿಹಾರ ನಿಧಿಯಿಂದ ಸೂಕ್ತ ಪರಿಹಾರ‌ ನೀಡಬೇಕು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT