ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಧಾರ್ ಜೋಡಣೆ ಕಡ್ಡಾಯ: ರೈತರ ಪ್ರತಿಭಟನೆ

ಮಾನವ ಸರಪಳಿ ನಿರ್ಮಿಸಿ ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಆಕ್ರೋಶ
Published : 5 ಸೆಪ್ಟೆಂಬರ್ 2024, 14:08 IST
Last Updated : 5 ಸೆಪ್ಟೆಂಬರ್ 2024, 14:08 IST
ಫಾಲೋ ಮಾಡಿ
Comments

ಹಾವೇರಿ: ‘ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ ಮಾಡಿರುವ ನಿಯಮವನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿ ರೈತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. 

ನಗರದ ಹಳೇ ಪಿ.ಬಿ ರಸ್ತೆಯಲ್ಲಿರುವ ಹೆಸ್ಕಾಂ ಕಚೇರಿಯಿಂದ ಹೊಸಮನಿ ಸಿದ್ಧಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿದ ರೈತರು, ತಮ್ಮ ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್) ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸಿದ್ದಪ್ಪ ವೃತ್ತದಲ್ಲಿ ಸೇರಿದ್ದ ರೈತರು, ಮಾನವ ಸರಪಳಿ ನಿರ್ಮಿಸಿ ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.

‘ರೈತ ದುಡಿದರೆ ಮಾತ್ರ ಎಲ್ಲರಿಗೂ ಅನ್ನ ಸಿಗುತ್ತದೆ. ಇಂಥ ರೈತರ ಬಗ್ಗೆ ಸರ್ಕಾರಗಳು ನಿಷ್ಕಾಳಜಿ ತೋರುತ್ತಿವೆ. ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರ, ಖಾಸಗೀಕರಣ ಮಾಡಲು ಹೊರಟಿದೆ. ಆಧಾರ್ ಜೋಡಣೆ ಮಾಡಿ ರೈತರಿಂದ ವಿದ್ಯುತ್ ಬಿಲ್ ವಸೂಲಿ ಮಾಡುವ ಹುನ್ನಾರ ನಡೆದಿದೆ. ಹೀಗಾಗಿ, ಆಧಾರ್ ಜೋಡಣೆ ಕಡ್ಡಾಯ ಆದೇಶವನ್ನು ರದ್ದು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ಪ್ರತಿಭಟನಕಾರರು ಹೇಳಿದರು.

‘ಕೊಳವೆ ಬಾವಿಗಳಿಗೆ 2023ರಿಂದ ಜಾರಿಗೊಳಿಸಿರುವ ಕಾನೂನು ರದ್ದು ಮಾಡಬೇಕು. ಹಿಂದಿನಂತೆ ವಿದ್ಯುತ್ ಪರಿವರ್ತಕ, ಕಂಬ, ವಿದ್ಯುತ್‌ ತಂತಿ ಇತರೆ ಉಪಕರಣಗಳನ್ನು ಸರಬರಾಜು ಮಾಡಿ ವಿದ್ಯುತ್‌ ಸಂಪರ್ಕ ನೀಡಬೇಕು. ವಿದ್ಯುತ್‌ ಅಪಘಾತಗಳಿಗೆ ಸಿಲುಕಿ ಮರಣ ಹೊಂದಿರುವ ರೈತರ ಕುಟುಂಬಕ್ಕೆ ತಲಾ ₹ 10 ಲಕ್ಷ ಪರಿಹಾರ ನೀಡಬೇಕು. ಸೋಲಾರ್‌ ಸಂಪರ್ಕ ಹೊಂದುವ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ಕಡಿತೊಳಿಸುವ ಆದೇಶವನ್ನೂ ಕೈ ಬಿಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT