ಹಾನಗಲ್: ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಸೋಮವಾರ ಚಾಲನೆ ನೀಡಲಾಯಿತು. ಜನಪ್ರತಿನಿಧಿಗಳು ಕೃಷಿ ಕ್ಷೇತ್ರದ ಸಮಸ್ಯೆಗಳತ್ತ ನಿರಾಸಕ್ತಿ ವಹಿಸುತ್ತಿದ್ದಾರೆ ಎಂದು ಈ ವೇಳೆ ರೈತ ಸಂಘದ ಪ್ರಮುಖರು ಹರಿಹಾಯ್ದರು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ಮುಂಗಾರು ಪ್ರವೇಶಿಸುವ ಈ ಸಮಯದಲ್ಲಿ ಕೃಷಿ ಚಟುವಟಿಕೆಗಳು ಚುರುಕು ಪಡೆಯುತ್ತಿವೆ. ಜಿಲ್ಲೆಯ ಹಲವು ಶಾಸಕರು ತಮ್ಮ ಕ್ಷೇತ್ರದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು, ವಿತರಣೆ ಕುರಿತು ಸ್ಥಳಕ್ಕೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸುತ್ತಿದ್ದಾರೆ. ಆದರೆ ಈ ತಾಲ್ಲೂಕಿನಲ್ಲಿ ಜನಪ್ರತಿನಿಧಿಗಳು ಈ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳ ಮಾಹಿತಿ ಮೇರೆಗೆ ಜನಪ್ರತಿನಿಧಿಗಳು ಕೆಲಸ ಮಾಡಿದರೆ, ರೈತರಿಗೆ ಅನ್ಯಾಯವಾಗಲಿದೆ. ಹೀಗಾಗಿ ಕೃಷಿ ವ್ಯವಸ್ಥೆಯನ್ನು ಪ್ರತ್ಯಕ್ಷವಾಗಿ ಗಮನಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಆಧ್ಯತೆ ನೀಡಬೇಕು ಎಂದು ಆಗ್ರಹಿಸಿದರು.

ಸಹಾಯಕ ಕೃಷಿ ನಿರ್ದೇಶಕ ಸುರೇಶ ಸಿ.ಟಿ ಮಾತನಾಡಿ, ತಾಲ್ಲೂಕಿನ 3 ರೈತ ಸಂಪರ್ಕ ಕೇಂದ್ರಗಳು ಮತ್ತು 6 ಉಪ ಕೇಂದ್ರಗಳ ಮೂಲಕ ಸೋಮವಾರದಿಂದ ಬಿತ್ತನೆ ಬೀಜ ವಿತರಣೆ ಕಾರ್ಯಾರಂಭಗೊಂಡಿದ್ದು, ಆಧಾರ ಕಾರ್ಡ್ ಕಡ್ಡಾಯ. ಕೆ ಕಿಸಾನ್ ಆಪ್ ಮೂಲಕ ಬೀಜ ವಿತರಣೆ ಮಾಡಲಾಗುತ್ತದೆ ಎಂದರು.

ಕೆಲವು ದಿನಗಳಿಂದ ಉತ್ತಮ ಮಳೆಯಾಗಿದೆ. ಬಿತ್ತನೆಗೆ ಪೂರಕ ವಾತಾವರಣ ಸಿಕ್ಕಿದೆ. ನಮ್ಮಲ್ಲಿ ಬಿತ್ತನೆ ಬೀಜದ ದಾಸ್ತಾನು ತೃಪ್ತಿದಾಯವಾಗಿದೆ. ರಸಗೊಬ್ಬರ ಕೊರತೆ ತಾಲೂಕಿನಲ್ಲಿ ಇಲ್ಲ ಎಂದರು. ಕೃಷಿ ಅಧಿಕಾರಿಗಳ ಶಿಪಾರಸ್ಸಿನ ಮೇರೆಗೆ ರೈತರು ನ್ಯಾನೋ ಡಿಎಪಿ ಬಳಸಬೇಕು. ಇತರೆ ಕಾಂಪ್ಲೆಕ್ಸ್ ಗೊಬ್ಬರನ್ನೂ ಬಳಸಬೇಕು ಎಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು. ರೈತ ಸಂಘದ ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ಕೃಷಿ ಅಧಿಕಾರಿಗಳ ಸಲಹೆ ಮೇರೆಗೆ ರೈತರು ಬಿತ್ತನೆ ಬೀಜಗಳನ್ನು ಖರೀದಿಸಬೇಕು. ಕಳಪೆ ಬೀಜ ವಿತರಣೆಗೆ ಅವಕಾಶ ನೀಡಬಾರದು ಎಂದರು.

ಕೃಷಿ ಅಧಿಕಾರಿಗಳಾದ ಸಂಗಮೇಶ ಹಕ್ಲಪ್ಪನವರ, ಶಾಮ್ಗೌಡ ಪಾಟೀಲ, ಕೃಷಿಕ ಸಮಾಜ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಟಿ.ಕಲ್ಲಗೌಡ್ರ, ಜಿಲ್ಲಾ ಪ್ರತಿನಿಧಿ ಅಡಿವೆಪ್ಪ ಆಲದಕಟ್ಟಿ, ಪ್ರಮುಖರಾದ ಸೋಮಶೇಖರ ಕೊತಂಬರಿ, ಮಖಬೂಲ್ಅಹ್ಮದ್ ಮಾಸನಕಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-22-1027793125

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.