ಶಿಗ್ಗಾವಿ (ಹಾವೇರಿ): ಇಲ್ಲಿಯ ಗುಡ್ಡದ ಓಣಿಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಸುಮಾ ಸವಣೂರು (29) ಅವರನ್ನು ಮಚ್ಚಿನಿಂದ ಹೊಡೆದು ಕೊಲೆ ಮಾಡಲಾಗಿದ್ದು, ಕೃತ್ಯ ಎಸಗಿದ್ದ ಆರೋಪದಡಿ ಅವರ ತಮ್ಮ ಸಂಜೀವ (27) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

'ಹುಬ್ಬಳ್ಳಿ ತಾಲ್ಲೂಕಿನ ತಾರಿಹಾಳದ ಸುಮಾ ಹಲವು ವರ್ಷಗಳಿಂದ ಅಂಗನವಾಡಿ ಸಹಾಯಕಿ ಆಗಿ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ವಿಚಾರಕ್ಕೆ ತಮ್ಮನೇ ಅವರನ್ನು ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ' ಎಂದು ಪೊಲೀಸರು ಹೇಳಿದರು.

'ಸೋಮವಾರ ಬೆಳಿಗ್ಗೆ ತಾರಿಹಾಳದಿಂದ ಸುಮಾ ಶಿಗ್ಗಾವಿಗೆ ಬಂದಿದ್ದರು. ಆರೋಪಿ ಸಂಜೀವ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ. ಅಂಗನವಾಡಿ ಕೇಂದ್ರಕ್ಕೆ ಬಂದಿದ್ದ ಸುಮಾ, ಒಳಗೆ ಹೊರಟಿದ್ದರು. ಇನ್ನೂ ಮಕ್ಕಳು ಬಂದಿರಲಿಲ್ಲ. ಅದೇ ಸಂದರ್ಭದಲ್ಲಿ ದಾಳಿ ಮಾಡಿದ್ದ ಆರೋಪಿ, ಮಚ್ಚಿನಿಂದ ಕೈ ಹಾಗೂ ಕತ್ತು ಹಾಗೂ ಇತರೆ ಭಾಗಗಳಿಗೆ ಹೊಡೆದಿದ್ದ. ತೀವ್ರ ರಕ್ತಸ್ರಾವದಿಂದ ಸುಮಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರೋಪಿಯನ್ನು ಸ್ಥಳೀಯರೇ ಹಿಡಿದಿದ್ದರು. ಮಾಹಿತಿ ಬರುತ್ತಿದ್ದಂತೆ, ಸ್ಥಳಕ್ಕೆ ಹೋಗಿ ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತರಲಾಗಿದೆ. ಕೊಲೆಗೆ ನಿಖರ ಕಾರಣ ಏನು ? ಎಂಬುದು ತನಿಖೆಯಿಂದ ತಿಳಿಯಬೇಕಿದೆ' ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.