ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಫ್‍ಟಿಗಳ ನೇಮಕ: ಅರ್ಜಿ ಆಹ್ವಾನ

Last Updated 11 ಜೂನ್ 2020, 14:17 IST
ಅಕ್ಷರ ಗಾತ್ರ

ಹಾವೇರಿ: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಜಿಲ್ಲೆಯಲ್ಲಿ 15 ಬಿಎಫ್‍ಟಿಗಳ (ಬರಗಾಲ ತಜ್ಞ) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರನ್ನು ಸಂಘಟಿಸಿ ಕಾಮಗಾರಿಗಳಲ್ಲಿ ತೊಡಗಿಸುವ ಮೂಲಕ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಲು ಮತ್ತು ಅನುಷ್ಠಾನಗೊಳಿಸುವ ಕಾಮಗಾರಿಗಳ ಕಾರ್ಯಸ್ಥಳದ ಮೇಲ್ವಿಚಾರಣೆ ಮಾಡಲು ಬಿಎಫ್‍ಟಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಯು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು (ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರರು ಎಂದರೆ ಸದರಿ ವ್ಯಕ್ತಿಯು ಹಿಂದಿನ ಮೂರು ವರ್ಷಗಳಲ್ಲಿ ಕನಿಷ್ಠ ಎರಡು ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ನರೇಗಾ ಯೋಜನೆಯಡಿ ಕೂಲಿಕಾರರಾಗಿ ಕೆಲಸ ಮಾಡಿರಬೇಕು). ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ 45 ವರ್ಷದೊಳಗಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಾಕಷ್ಟು ಪ್ರಾಧಾನ್ಯತೆ ನೀಡಲಾಗುವುದು.

ಅರ್ಜಿ ನಮೂನೆಯನ್ನು ಜಿಲ್ಲೆಯ ಎಲ್ಲ 223 ಗ್ರಾಮ ಪಂಚಾಯತಿಗಳಲ್ಲಿ ಪಡೆಯಬಹುದಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಜೂನ್‌ 30ರೊಳಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಚೇರಿ, ಜಿಲ್ಲಾಡಳಿತ ಭವನ, ದೇವಗಿರಿ-ಹಾವೇರಿ. ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಸಿಇಒ ರಮೇಶ ದೇಸಾಯಿ ಪ್ರಕಟಣೆಯಲ್ಲಿ ತಿಳಿಸಿದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT