ಬ್ಯಾಡಗಿ (ಹಾವೇರಿ ಜಿಲ್ಲೆ): ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದ ಕೋಟೆ ಗುಡ್ಡದ ಬಳಿ ರಾಷ್ಟ್ರೀಯ ಹೆದ್ಧಾರಿ 48ರಲ್ಲಿ ಶುಕ್ರವಾರ ಬೆಳಿಗ್ಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸ್ಥಳದಲ್ಲೇ ಮೃತಪಟ್ಟಿದೆ.

ಕಾಯ್ದಿಟ್ಟ ಅರಣ್ಯದಿಂದ ಚಿರತೆ ರಾಷ್ಟ್ರೀಯ ಹೆದ್ದಾರಿ–48 ದಾಟುವಾಗ ವಾಹನ ಡಿಕ್ಕಿ ಹೊಡೆದಿರಬಹುದು. ಹೆಣ್ಣು ಚಿರತೆ ಎರಡು ಅಡಿ ಎತ್ತರ ಮತ್ತು 5.4 ಅಡಿ ಉದ್ದವಿತ್ತು. ಸ್ಥಳ ಮಹಜರು ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಚಿರತೆಯ ಮೃತದೇಹವನ್ನು ದಫನ್ ಮಾಡಲಾಗಿದೆ ಎಂದು ಅರಣ್ಯ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-22-2140464597

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.