ಹಾವೇರಿ: ‘ಜಿಲ್ಲೆಯಲ್ಲಿರುವ ಬಸ್ ನಿಲ್ದಾಣಗಳ ಮಳಿಗೆಗಳಲ್ಲಿ ತಂಬಾಕು, ಗುಟ್ಕಾ ಸೇರಿದಂತೆ ಎಲ್ಲ ಬಗೆಯ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಬೇಕು. ನಿಲ್ದಾಣದಲ್ಲಿಯೂ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡದಂತೆ ಸಾರ್ವಜನಿಕರನ್ನು ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚನೆ ನೀಡಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ತಂಬಾಕು ನಿಯಂತ್ರಣದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ’ಯಲ್ಲಿ ಅವರು ಮಾತನಾಡಿದರು.

‘ತಂಬಾಕು ನಿಯಂತ್ರಣ ತಿದ್ದುಪಡಿ ಕಾಯ್ದೆ–2024ರ ಅನ್ವಯ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆ ನಿಷೇಧಿಸಲಾಗಿದೆ. 21 ವರ್ಷದೊಳಗಿನವರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ದಂಡದ ಮೊತ್ತವನ್ನು ₹ 200 ಬದಲು ₹ 1 ಸಾವಿರಕ್ಕೆ ಏರಿಸಲಾಗಿದೆ. ಈ ಕಾಯ್ದೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ದಂಡದ ಸೂಚನಾ ಫಲಕ ಅಳವಡಿಸಬೇಕು’ ಎಂದು ಸೂಚಿಸಿದರು.

‘ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ, ಶಾಲಾ–-ಕಾಲೇಜು ಮಕ್ಕಳಿಗೆ ಸತತವಾಗಿ ಅರಿವು ಮೂಡಿಸಬೇಕು. ತಾಲ್ಲೂಕು ಮಟ್ಟದಲ್ಲಿ ನಿಯಮಾನುಸಾರ ಸಭೆ ನಡೆಸಬೇಕು. ಅಂಗಡಿಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಿ, ನಿಯಮ ಉಲ್ಲಂಘನೆ ಕಂಡುಬಂದರೆ ಕ್ರಮ ಜರುಗಿಸಬೇಕು’ ಎಂದು ಹೇಳಿದರು.

‘ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ತಂಬಾಕು ಮಾರಾಟಗಾರರಿಗೆ ನಿಯಮನುಸಾರ ಪ್ರತ್ಯೇಕ ಪರವಾನಗಿ ನೀಡಬೇಕು. ಪರವಾನಗಿ ನಿಯಮಗಳ ಪಾಲನೆ ಬಗ್ಗೆ ನಿಗಾ ವಹಿಸಬೇಕು. ಪಾಲನೆ ಮಾಡದಿದ್ದರೆ, ಅಂತಹ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಜರುಗಿಸಬೇಕು’ ಎಂದು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು.

100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧ: ‘ಶಾಲಾ–ಕಾಲೇಜು ಇರುವ ಪ್ರದೇಶದ ಸುತ್ತಲಿನ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ. ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಪ್ರತಿನಿಧಿಗಳು ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಿ, ತಂಬಾಕು ಉತ್ಪನ್ನಗಳ ಮಾರಾಟವನ್ನು ತಡೆಯಬೇಕು. ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು’ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಜಗದೀಶ ಪಾಟೀಲ ಮಾತನಾಡಿ, ‘ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ 2025–26ನೇ ಸಾಲಿನಲ್ಲಿ 29 ಸ್ಥಳಗಳ ಮೇಲೆ ದಾಳಿ ಮಾಡಲಾಗಿದೆ. 316 ಪ್ರಕರಣ ದಾಖಲಿಸಿ, ₹ 30,100 ದಂಡ ಸಂಗ್ರಹಿಸಲಾಗಿದೆ’ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜಯಾನಂದ, ಡಾ. ಚನ್ನಬಸಯ್ಯ ವಿರಕ್ತಮಠ, ಡಾ. ಸರಿತಾ, ಡಾ. ನೀಲೇಶ, ಡಾ. ಸಂತೋಷ ದಡ್ಡಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-22-1477880854

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.