ಬ್ಯಾಡಗಿ: ತಾಲ್ಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ ಪರಿಣಾಮ ತೀವ್ರ ಗಾಯಗೊಂಡಿದ್ದ ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣೇಶ ಪರಶುರಾಮ ಅಗಸಿಬಾಗಿಲ ಗಾಯಗೊಂಡ ಬಾಲಕ.

ಬೀದಿ ನಾಯಿಗಳನ್ನು ನಿಯಂತ್ರಿಸುವಂತೆ ಹಲವಾರು ಬಾರಿ ಮನವಿ ಮಾಡಿದರೂ ಗ್ರಾಮ ಪಂಚಾಯಿತಿ ಪಿಡಿಒ ನಿರ್ಲಕ್ಷ್ಯ ತೋರಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪಿಡಿಒ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಗ್ರಾ.ಪಂ.ಗೆ ಬೀಗ: ಹಿರೇಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸರಿಯಾಗಿ ಕಚೇರಿಗೆ ಬರುತ್ತಿಲ್ಲ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದಾಗಿ ಮಗುವಿನ ಮೇಲೆ ನಾಯಿಗಳ ಹಿಂಡು ದಾಳಿ ನಡೆಸಿವೆ ಎಂದು ಪೋಷಕರು ಆರೋಪಿಸಿ ಬುಧವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಯಿತು.

ಪಿಡಿಒ ಅವರನ್ನು ಅಮಾನತು ಮಾಡಿ ಬೇರೆಡೆ ವರ್ಗಾವಣೆ ಮಾಡುವಂತೆ ಜನರು ಆಗ್ರಹಿಸಿದರು.

ಈ ವೇಳೆ ಪರಶುರಾಮ ಅಗಸಿಬಾಗಿಲ, ಶಿವರಾಜ ದೇಸೂರು, ವೀರೇಶ ದೇಸೂರು, ರಮೇಶ ಬೂದಗಟ್ಟಿ, ಆರ್.ಹನುಮಂತಪ್ಪ, ರುದ್ರಪ್ಪ ಹಿರೇಹಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-22-591953044

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.