ಬ್ಯಾಡಗಿ: ತಾಲ್ಲೂಕಿನ ಮೋಟೆಬೆನ್ನೂರದಿಂದ ಕೋಡಿಹಳ್ಳಿ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿರುವ ರೈಲ್ವೆ ಹಳಿ ಪಕ್ಕದಲ್ಲಿ ರೈತರ ಹೊಲಗಳಿಗೆ ತೆರಳಲು ಅನುಕೂಲವಾಗುವಂತೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿಕೊಡುವಂತೆ ರೈತ ಸಂಘದ ಗ್ರಾಮ ಘಟಕದ ವತಿಯಿಂದ ಶುಕ್ರವಾರ ತಹಶೀಲ್ದಾರ್ ಚಂದ್ರಶೇಖರ ನಾಯಕ ಅವರಿಗೆ ಮನವಿ ಸಲ್ಲಿಸಲಾಯಿತು.

ನೇತೃತ್ವ ವಹಿಸಿದ್ದ ರೈತ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜು ಬಳ್ಳಾರಿ ಮಾತನಾಡಿ, ಕಳೆದ 60 ವರ್ಷಗಳಿಂದ ರೈಲ್ವೆ ಹಳಿ ಎಡಭಾಗದ ಸರ್ವೆ ನಂ.42 ರಿಂದ 133 ರವರೆಗೆ ಮತ್ತು ಹಾಗೂ ಬಲಭಾಗದ ಸರ್ವೆ ನಂ.45 ರಿಂದ 210 ರವರೆಗೆ ರೈತರು ಜಮೀನುಗಳಿಗೆ ತೆರಳಲು ಇದೇ ದಾರಿಯನ್ನು ಬಳಸುತ್ತಿದ್ದಾರೆ. ಆದರೆ ಈಚೆಗೆ ರೈಲ್ವೆ ಡಬಲ್ ಲೈನ್ ನಿರ್ಮಾಣದ ಬಳಿಕ ಚಕ್ಕಡಿಗಳ ಸಂಚಾರಕ್ಕೆ ಸಮಸ್ಯೆಯಾಗಿದೆ ಎಂದು ಹೇಳಿದರು.

ಕೇವಲ 500 ಮೀಟರ್ ಕಾಂಕ್ರೀಟ್ ರಸ್ತೆ ನಿರ್ಮಿಸಿದ್ದು, ಇನ್ನುಳಿದ ರಸ್ತೆಯನ್ನು ನಿರ್ಮಿಸಬೇಕಾಗಿದೆ. ರಸ್ತೆ ಇಲ್ಲದೆ ರೈತರ ಕೃಷಿ ಚಟುವಟಿಕೆಗಳಿಗೆ ತುಂಬಾ ಅಡಚಣಿಯಾಗುತ್ತಿದೆ. ಈಚೆಗೆ ಸಂಸದ ಬಸವರಾಜ ಬೊಮ್ಮಾಯಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಇಲ್ಲಿಯ ರೈತರಿಗೆ ಕಾಂಕ್ರೀಟ್ ರಸ್ತೆ ನಿರ್ಮಿಸಿ ಕೊಡುವ ಭರವಸೆ ನೀಡಿದ್ದರು. ಆದರೆ ಇದುವರೆಗೆ ರಸ್ತೆ ನಿರ್ಮಾಣವಾಗಿಲ್ಲ. ರೈತರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.

ಕೂಡಲೇ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಮುಂದಾಗಬೇಕು. ವಿಳಂಬವಾದರೆ ಏಪ್ರೀಲ್ 6ರಿಂದ ಬೃಹತ್ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಈ ವೇಳೆ ರೈತ ಮುಖಂಡರಾದ ಬಸವರಾಜ ಚಂದ್ರಪ್ಪನವರ, ಪ್ರದೀಪ ಮಲ್ಲೂರ, ಮಾಲತೇಶ ಮೈಲಾರ, ನಿಂಗಪ್ಪ ಅಂಗರಗಟ್ಟಿ, ಶಿವಪ್ಪ ಮತ್ತೂರ, ದಾನಪ್ಪ ಬಳ್ಳಾರಿ, ಸುಭಾಷ ಬನ್ನಿಹಟ್ಟಿ, ಸುರೇಶ ಹಿತ್ತಲಮನಿ, ರಮೇಶ ಹೊಳಲ, ಮುತ್ತಪ್ಪ ಆನವೇರಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-22-1409543601

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.