ಬ್ಯಾಡಗಿ: ಪಟ್ಟಣದ ಮುಖ್ಯರಸ್ತೆಯ ಮೂಲಕ ಹಾಯ್ದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿಯಲ್ಲಿ ಬರುವ ಅಂಗಡಿಗಳ ತೆರವು ಕಾರ್ಯಾಚರಣೆ ಮೇ 24ರವರೆಗೂ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮುಖ್ಯರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಪರಿವರ್ತಿಸುವ ಉದ್ದೇಶದಿಂದ ಅದಕ್ಕೆ ಬೇಕಾಗುವ 1,050 ಮೀಟರ್ ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದೆ. ಕೆಲ ಕಟ್ಟಡ ಮಾಲೀಕರು ಸ್ವಯಂ ಪ್ರೇರಣೆಯಿಂದ ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲದೆ ಚೌಡೇಶ್ವರಿ ದೇವಸ್ಥಾನ ತೆರವಿಗೆ ಕಾಲಾವಕಾಶ ನೀಡಲಾಗಿದೆ.

ಇನ್ನೂ ಕೆಲವು ಬೃಹತ್ ಕಟ್ಟಡಗಳ ತೆರವು ಕಾರ್ಯ ನಿಧಾನ ಗತಿಯಲ್ಲಿ ಸಾಗಿದೆ. ಹೀಗಾಗಿ ಮುಖ್ಯ ರಸ್ತೆಯಲ್ಲಿನ ಕಟ್ಟಡಗಳ ಅವಶೇಷ ತೆಗೆಯವ ಕಾರ್ಯ ಭರದಿಂದ ಸಾಗಿದ್ದು, ಅದನ್ನು ಆಶ್ತಯ ಕಾಲೊನಿಗೆ ತೆರಳುವ ರಸ್ತೆ ಬದಿ ಗುಂಡಿಗೆ ಹಾಕಲಾಗುತ್ತಿದೆ.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಪಟ್ಟಣದ ಮುಖ್ಯ ರಸ್ತೆಯ ಅಂಗಡಿಗಳ ತೆರವು ಕಾರ್ಯದ ಪ್ರಗತಿಯನ್ನು ಸ್ವತ: ವೀಕ್ಷಿಸಿದರು.

‘ಭೂಸ್ವಾಧೀನಕ್ಕೆ ಅಗತ್ಯವಿರುವ ಇನ್ನುಳಿದ ಕಟ್ಟಡಗಳನ್ನು ಸೋಮವಾರದೊಳಗೆ ತೆರವುಗೊಳಿಸಬೇಕು ಎಂದು ಭೂಮಾಲಿಕರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನವ ಮಾಹಿತಿ ಲಭ್ಯವಾಗಿದೆ. ರಸ್ತೆ ಮಧ್ಯದಿಂದ ರಸ್ತೆಯ ಎರಡೂ ಬದಿಗೂ ತಲಾ 33 ಅಡಿ ಜಾಗೆ ತೆರವುಗೊಳಿಸಿದ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಕೊಳ್ಳುತ್ತಿದ್ದಾರೆ.

ಹೀಗಾಗಿ ಇನ್ನೂ ತೆರವು ಕಾರ್ಯಾಚರಣೆ ಮುಂದುವರೆದಿದೆ. ಜೊತೆಗೆ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಪ್ರಜಾವಾಣಿಗೆ ಮಾಹಿತಿ ನೀಡಿದರು.

ಡಿಪಿಆರ್ ಸಿದ್ಧತೆ: ಮುಖ್ಯರಸ್ತೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಕೊಳ್ಳಲು ಸರ್ಕಾರ ₹ 13 ಕೋಟಿ ಹಣವನ್ನು ಎಪಿಎಂಸಿಯಿಂದ ಒದಗಿಸಿದೆ.

ಈ ಹಿನ್ನೆಲೆಯಲ್ಲಿ ಒಳಚರಂಡಿ, 24x7 ಕುಡಿಯುವ ನೀರಿನ ವ್ಯವಸ್ಥೆ, ರಸ್ತೆಯ ಎರಡೂ ಬದಿಗೂ ಪ್ಲಾಟ್ ಫಾರ್ಂ, ಚರಂಡಿ ನಿರ್ಮಾಣ ಹಾಗೂ ದೊಡ್ಡ ಸಿಡಿಗಳ ನಿರ್ಮಾಣದ ಯೋಜನೆಯ ಸಿದ್ದತೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.

ಈಗಾಗಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಒಂದು ಸುತ್ತಿನ ಸಭೆ ನಡೆದಿದ್ದು, ಇನ್ನೊಂದು ಸಭೆ ನಡೆಸಿ ಅಂತಿಮ ರೂಪಕ್ಕೆ ಬರಬೇಕಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಟ್ಟಣದ ಕೆಲ ನಿವಾಸಿಗಳು ಜಿಲ್ಲೆಯಲ್ಲಿಯೇ ಅತ್ಯತ್ತಮ ರಸ್ತೆ ನಿರ್ಮಾಣ ಮಾಡಬೇಕು, ಮೆಣಸಿಣಕಾಯಿಗೆ ಸಂಬಂಧಿಸಿದ ವೃತ್ತಗಳನ್ನು ನಿರ್ಮಿಸಿ ಲೈಟ್ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-22-946861851

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.