ಬ್ಯಾಡಗಿ: ಪಟ್ಟಣದ ಮುಖ್ಯ ರಸ್ತೆಯ ಮೂಲಕ ಹಾಯ್ದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿ ವಿಸ್ತರಣಾ ಕಾರ್ಯ ಪ್ರಗತಿಯಲ್ಲಿದ್ದು, ಎರಡು ದಿನ ಸ್ಥಗಿತಗೊಂಡ ಹಿಟ್ಯಾಚಿ ಕಾರ್ಯಾಚರಣೆ ಬುಧವಾರ ಮತ್ತೆ ಮುಂದುವರೆಯಿತು.

ಬೆಳಿಗ್ಗೆ ಹಂಸಭಾವಿ ರಸ್ತೆಯ ಬೀರೇಶ್ವರ ಸಮುದಾಯ ಭವನ ಹಾಗೂ ಮುಖ್ಯ ರಸ್ತೆಯ ಕೆಲವು ಅಗಡಿಗಳನ್ನು ತೆರವುಗೊಳಿಸಲಾಯಿತು. ಆಪರೇಟರ್ಗಳು ಸಿಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಎರಡು ದಿನ ಸ್ಥಗಿತಗೊಳಿಸಲಾಗಿತ್ತು. ಎರಡು ದಿನಗಳಲ್ಲಿ ತೆರವು ಕಾರ್ಯಚರಣೆಯನ್ನು ಪೂರ್ಣಗೊಳಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆಯ ಉಪ ವಿಭಾಗದ ಸಹಾಯಕ ಎಂಜಿನಿಯರ್ ಎ.ಎಸ್.ಪಾಟೀಲ ‘ಪ್ರಜಾವಾಣಿ‘ಗೆ ತಿಳಿಸಿದರು. ನಗರ ವ್ಯಾಪ್ತಿಯ ಕೆಸಿಸಿ ಬ್ಯಾಂಕ್ನಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ರಾಜ್ಯ ಹೆದ್ಧಾರಿಯನ್ನು ಚತುಸ್ಪಥ ರಸ್ತೆಯನ್ನಾಗಿ ಪರಿವರ್ತಿಸುವ ಉದ್ದೇಶದಿಂದ 1,050 ಮೀ ಜಾಗೆಯನ್ನು ಭೂಸ್ವಾಧೀನ ಪ್ರಕ್ರಿಯೆ ವ್ಯಾಪ್ತಿಗೆ ಒಳಪಡಿಸಲಾಗಿತ್ತು. ಈಗ ತೆರವು ಕಾರ್ಯಾಚರಣೆ ಮಂದಗತಿಯಲ್ಲಿ ಸಾಗಿದ್ದು, ಅದರ ವೇಗವನ್ನು ಇನ್ನಷ್ಟು ತೀವ್ರಗೊಳಿಸಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-22-1131511035

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.