ಹಾನಗಲ್: ‘ಆದಷ್ಟು ಬೇಗ ಸಚಿವ ಸಂಪುಟ ಪುನರ್ರಚನೆಯಾಗಿ, ಅಭಿವೃದ್ಧಿ ಮತ್ತು ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಹೊಸಮುಖಗಳಿಗೆ ಅವಕಾಶ ಸಿಗಬೇಕು. ಹಾವೇರಿ ಜಿಲ್ಲೆಗೂ ಸಂಪುಟದಲ್ಲಿ ಪ್ರಾತಿನಿಧ್ಯ ದೊರಕಬೇಕು’ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ತಾಲ್ಲೂಕಿನ ಅಕ್ಕಿಆಲೂರಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವುದಾಗಿ ವರಿಷ್ಠರು ತಿಳಿಸಿದ್ದರು. ವಿಧಾನಸಭೆ ಅಧಿವೇಶನ, ಉಪ ಚುನಾವಣೆ ಹೀಗೆ ಬೇರೆ, ಬೇರೆ ಕಾರಣಗಳಿಂದ ಸಂಪುಟ ವಿಸ್ತರಣೆ ವಿಳಂಬವಾಗಿದೆ. ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿದೆ. ವಿಸ್ತರಣೆ ಮತ್ತಷ್ಟು ವಿಳಂಬವಾದರೆ ಕೆಲಸ ಮಾಡಲು ಹೆಚ್ಚು ಅವಕಾಶ ಸಿಗುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.

‘ಮೂರು ಬಾರಿಗಿಂತ ಹೆಚ್ಚು ಅವಧಿ ಗೆದ್ದಿರುವ ಹಿರಿಯ ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲು ನಿರ್ಧರಿಸಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೂ ಸಹ ಮಾಹಿತಿ ನೀಡಿದ್ದೇವೆ’ ಎಂದು ತಿಳಿಸಿದರು.

‘ಜಿಲ್ಲೆಯ ಎಲ್ಲ ಆರು ಸ್ಥಾನಗಳಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿದ್ದೇವೆ. ನಾನೂ ಸೇರಿದಂತೆ ಹಿರಿಯ ಶಾಸಕರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಯು.ಬಿ. ಬಣಕಾರ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದು, ನಮ್ಮಲ್ಲಿ ಯಾರನ್ನೇ ಸಚಿವರಾಗಿ ಮಾಡಿದರೂ ಪೂರ್ಣ ಸಹಮತವಿದೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

‘ಒಟ್ಟಾರೆ ಜಿಲ್ಲೆಗೆ ಪ್ರಾತಿನಿಧ್ಯ ಸಿಗಬೇಕು ಎನ್ನುವುದಷ್ಟೇ ನಮ್ಮ ಹಕ್ಕೊತ್ತಾಯವಾಗಿದೆ. ಈ ಬಾರಿ ಖಂಡಿತವಾಗಿಯೂ ಜಿಲ್ಲೆಗೆ ಅವಕಾಶ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-22-1139806506

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.