ಹಾವೇರಿ: ಮೈಲಾರಲಿಂಗೇಶ್ವರ ಸ್ವಾಮಿ ಜಾತ್ರೆಗೆ ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಶಿಗ್ಗಾವಿ ತಾಲ್ಲೂಕಿನ ಹೊನ್ನಾಪುರ ಗ್ರಾಮದ ಬಳಿ ಶುಕ್ರವಾರ ಅಪಘಾತ ಸಂಭವಿಸಿದೆ.

ಹುಬ್ಬಳ್ಳಿ ತಾಲ್ಲೂಕಿನ ಶೆರೇವಾಡ ಗ್ರಾಮದ ಹನುಮಂತಪ್ಪ ಮುಲಗಿ (55) ಚಂದ್ರು ಸಿರಕೋಳ (40) ಮೃತಪಟ್ಟವರು. ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಶಿಗ್ಗಾವಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೆರೇವಾಡ ಗ್ರಾಮದಿಂದ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮಕ್ಕೆ ಹೋಗುತ್ತಿದ್ದ ಟ್ರ್ಯಾಕ್ಟರ್ನ ಹಿಂಭಾಗ ಕಾಲು ಜೋತು ಬಿಟ್ಟುಕೊಂಡು ಕುಳಿತಿದ್ದ ಭಕ್ತರಿಗೆ ಹುಬ್ಬಳ್ಳಿಯಿಂದ ಹಾವೇರಿ ಕಡೆ ಬರುತ್ತಿದ್ದ ಕಾರು ಏಕಾಏಕಿ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಮೃತಪಟ್ಟವರ ಕುಟುಂಬಸ್ಥರು ಮತ್ತು ಸಂಬಂಧಿಕರ ರೋದನ ಮುಗಿಲು ಮುಟ್ಟುವಂತಿತ್ತು.

ಸ್ಥಳಕ್ಕೆ ತಡಸ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.