ಹಾವೇರಿ: ತಾಲ್ಲೂಕಿನ ಗೌರಾಪುರ ಬಳಿಯ ಕಸ ವಿಲೇವಾರಿ ಘಟಕದ ಎದುರಿನ ರಸ್ತೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಹಿಂಬದಿ ಕುಳಿತಿದ್ದ ಲಕ್ಷ್ಮವ್ವ ಮುಗದೂರು ಅವರು ಮೃತಪಟ್ಟಿದ್ದಾರೆ.

ಹಾವೇರಿ–ಹಾನಗಲ್ ಮುಖ್ಯರಸ್ತೆಯಲ್ಲಿ ಏ.7ರಂದು ಮಧ್ಯಾಹ್ನ ನಡೆದಿರುವ ಅಪಘಾತ ಸಂಬಂಧ ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕುಳೇನೂರು ಗ್ರಾಮದ ಮಂಜುನಾಥ ಯಲ್ಲಪ್ಪ ದುರುಗಣ್ಣನವರ ಹಾಗೂ ಲಕ್ಷ್ಮವ್ವ ಅವರು ಬೈಕ್ನಲ್ಲಿ ಹೊರಟಿದ್ದರು. ದಾವಣಗೇರಿ ನಿವಾಸಿಯಾದ ಆರೋಪಿ ವಿಫುಲ್ ವಿನೋದ ಜೈನ್ ಕಾರಿನಲ್ಲಿ ತೆರಳುತ್ತಿದ್ದರು. ಕಸ ವಿಲೇವಾರಿ ಘಟಕದ ಬಳಿ ನಿರ್ಲಕ್ಷ್ಯ ಹಾಗೂ ಅತೀ ವೇಗದಲ್ಲಿ ಕಾರು ಚಲಾಯಿಸಿ, ಬೈಕ್ಗೆ ಡಿಕ್ಕಿ ಹೊಡೆದಿದ್ದರು. ಇದರಿಂದಾಗಿ ಮಂಜುನಾಥ ಹಾಗೂ ಲಕ್ಷ್ಮವ್ವ ಅವರಿಗೆ ತೀವ್ರ ಪೆಟ್ಟು ಬಿದ್ದಿತ್ತು. ಜಿಲ್ಲಾಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಲಕ್ಷ್ಮವ್ವ ಮೃತಪಟ್ಟಿದ್ದಾರೆ. ಮಂಜುನಾಥ್ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಅಪಘಾತಕ್ಕೆ ಕಾರಣವಾದ ಆರೋಪದಡಿ ವಿಫುಲ್ ಜೈನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಪಘಾತದಲ್ಲಿ ಕಾರು ಹಾಗೂ ಬೈಕ್ ಭಾಗಶಃ ಜಖಂಗೊಂಡಿವೆ’ ಎಂದು ಅವರು ಹೇಳಿದರು..

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-22-1920449171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.