ಹಾವೇರಿ: ‘ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದು, ಜನರ ಆಶೀರ್ವಾದ ನಮ್ಮ ಮೇಲಿದೆ. ಬಸವರಾಜ ಬೊಮ್ಮಾಯಿ, ಬಿ.ಸಿ. ಪಾಟೀಲ ಸೇರಿದಂತೆ ಬಿಜೆಪಿಯ ಘಟಾನುಘಟಿಗಳೂ ಜಿಲ್ಲೆಯಲ್ಲಿದ್ದಾರೆ. ಇವರೆಲ್ಲರ ನಡುವೆ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಿ, ಮುಂಬರುವ ಚುನಾವಣೆಯಲ್ಲಿ ಜಯಭೇರಿ ಸಾಧಿಸಲು ನಮ್ಮಲ್ಲಿಯೇ ಒಬ್ಬರಿಗೆ ಸಚಿವ ಸ್ಥಾನ ನೀಡುವ ಅವಶ್ಯವಿದೆ’ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಪಕ್ಷ ನೀಡುವ ಎಲ್ಲ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದೇನೆ. ನಾನೀಗ ತಮಿಳುನಾಡು ಚುನಾವಣೆ ಕೆಲಸದಲ್ಲಿದ್ದೇನೆ. ಮೇ ತಿಂಗಳಿನಲ್ಲಿ ಸಚಿವ ಸಂಪುಟ ವಿಸ್ತರಣೆಯಾದರೆ, ನನಗೂ ಅವಕಾಶ ಸಿಗುವ ವಿಶ್ವಾಸವಿದೆ’ ಎಂದರು.

‘ಜಿಲ್ಲೆಯ ಜನರು, ಕಾಂಗ್ರೆಸ್ಗೆ ಬಹುಮತ ನೀಡಿದ್ದಾರೆ. ಹಾವೇರಿ ಜಿಲ್ಲೆಯು ಬಿಜೆಪಿ ಶಾಸಕ ಮುಕ್ತವಾಗಿದೆ. ಅಷ್ಟಾದರೂ ನಾವು ಸುಮ್ಮನೇ ಕೂರುವಂತಿಲ್ಲ. ಜನರು ನಮ್ಮ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು, ಜಿಲ್ಲೆಯಲ್ಲಿ ಅಭಿವೃದ್ಧಿಪಥದತ್ತ ಕೊಂಡೊಯ್ಯಬೇಕು. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಸಾಕಷ್ಟು ಸವಾಲುಗಳು ನಮ್ಮ ಮುಂದಿವೆ. ಜಿಲ್ಲೆಯ ಒಬ್ಬರಿಗೆ ಸಚಿವ ಸ್ಥಾನ ಕೊಟ್ಟರೆ, ಸವಾಲುಗಳನ್ನು ಎದುರಿಸಿ ಮುಂಬರುವ ಚುನಾವಣೆಗೆ ನಾವು ಸಿದ್ಧರಾಗುತ್ತೇವೆ’ ಎಂದು ಹೇಳಿದರು.

‘ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಯೂತ್ ಕಾಂಗ್ರೆಸ್ ಸಂಘಟನೆಯ ಮೂಲಕ ಕೆಲಸ ಆರಂಭಿಸಿದ್ದೆ. 2004ರಿಂದ 2011ರವರೆಗೆ ಯೂತ್ ಕಾಂಗ್ರೆಸ್ ರಾಜ್ಯ ಘಟಕದ ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ನಂತರ, ಎರಡು ಅವಧಿಯಲ್ಲಿ ವಿಧಾನಪರಿಷತ್ ಸದಸ್ಯನಾಗಿದ್ದೆ. ಈಗ ಎರಡನೇ ಅವಧಿಯಲ್ಲಿ ವಿಧಾನಸಭೆ ಸದಸ್ಯನಾಗಿದ್ದೇನೆ. ಸಚಿವನಾಗುವ ಅರ್ಹತೆ ನನಗಿದೆ. ಜಿಲ್ಲೆಗೆ ಸಚಿವ ಸ್ಥಾನ ಕೊಟ್ಟರೆ, ನನ್ನನ್ನೂ ಪರಿಗಣಿಸುವಂತೆಯೂ ವರಿಷ್ಠರನ್ನು ಕೋರಿದ್ದೇನೆ. ಆದರೆ, ಅವರು ಜಿಲ್ಲೆಯ ಯಾರಿಗಾದರೂ ಸ್ಥಾನ ಕೊಟ್ಟರೆ ಸಂತೋಷವಿದೆ. ಎಲ್ಲರೂ ಒಟ್ಟಿಗೆ ಸೇರಿ ಪಕ್ಷವನ್ನು ಬಲಪಡಿಸುತ್ತೇವೆ’ ಎಂದು ತಿಳಿಸಿದರು.

‘ಸಚಿವ ಸ್ಥಾನದ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಭಿನಾಭಿಪ್ರಾಯವಿಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಹಿರಿಯ ನಾಯಕರ ಮುಂದಾಳತ್ವದಲ್ಲಿ ಮುನ್ನಡೆಯುತ್ತಿದ್ದೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-22-55539438

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.