ಹಾವೇರಿ: ‘ಮಹಿಳೆಯರಿಗೆ ರಾಜಕೀಯದಲ್ಲಿ ಶೇ 33ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟವು, ಮಹಿಳಾ ವಿರೋಧಿ ನೀತಿ ಅನುಸರಿಸಿವೆ’ ಎಂದು ಆರೋಪಿಸಿ ‘ನಾರಿಶಕ್ತಿ ಫೋರಂ’ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತದವರೆಗೂ ಪ್ರತಿಭಟನಾ ಪಾದಯಾತ್ರೆ ನಡೆಸಲಾಯಿತು. ಅಂತಿಮವಾಗಿ ಗಾಂಧಿ ವೃತ್ತದಲ್ಲಿ ಸೇರಿದ್ದ ಪ್ರತಿಭಟನಕಾರರು, ಕಾಂಗ್ರೆಸ್ ಪಕ್ಷ ಹಾಗೂ ಇಂಡಿ ಒಕ್ಕೂಟದ ಪಕ್ಷಗಳ ವಿರುದ್ಧ ಆಕ್ರೋಶ ಹೊರಹಾಕಿದರು. ನಾರಿಶಕ್ತಿ ಫೋರಂ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಸಹಯೋಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸಮ್ಮ ಅಬಲೂರ ಮಾತನಾಡಿ, ‘ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮಹಿಳಾ ಮೀಸಲಾತಿ ನೀಡುವ ಮಸೂದೆಗೆ ಬಹುಮತ ಸಿಗಬೇಕಿತ್ತು. ಆದರೆ, ಕಾಂಗ್ರೆಸ್ ಹಾಗೂ ಇಂಡಿ ಒಕ್ಕೂಟದ ಪಕ್ಷಗಳು ವಿರೋಧ ಮಾಡಿವೆ. ಇದು ಮಹಿಳೆಯರಿಗೆ ಮಾಡಿರುವ ಅನ್ಯಾಯ’ ಎಂದರು.

ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸ್ಸೀಮಗೌಡ್ರ ಮಾತನಾಡಿ, ‘ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡರು, ತಮ್ಮ ಕುಟುಂಬದಲ್ಲಿ ಮಾತ್ರ ಮಹಿಳಾ ಮೀಸಲಾತಿ ಇಟ್ಟುಕೊಂಡಿದ್ದಾರೆ. ದೇಶದ ಮಹಿಳೆಯರಿಗೆ ಮೀಸಲಾತಿ ನೀಡಲು ಅಡ್ಡಿಪಡಿಸುತ್ತಿದ್ದಾರೆ’ ಎಂದು ದೂರಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ‘ಕಾಂಗ್ರೆಸ್ ಪಕ್ಷವು ಮಹಿಳಾ ವಿರೋಧಿ ಧೋರಣೆ ತೋರಿದೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ’ ಎಂದರು.

ಮುಖಂಡರಾದ ಬಿ.ಸಿ. ಪಾಟೀಲ, ಶಿವರಾಜ ಸಜ್ಜನರ, ಗವಿಸಿದ್ದಪ್ಪ ದ್ಯಾಮಣ್ಣವರ, ಯಲ್ಲಮ್ಮ ಚಲವಾದಿ, ರೇಷ್ಮಾ ಮೇಲಗಿರಿ, ನಂಜುಂಡೇಶ ಕಳ್ಳೇರ, ಸಂತೋಷ ಆಲದಕಟ್ಟಿ, ನೀಲಪ್ಪ ಚಾವಡಿ, ವಿದ್ಯಾ ಶೆಟ್ಟಿ, ವೆಂಕಟೇಶ ನಾರಾಯಣಿ, ಕಿರಣ ಕೊಣನವರ, ನಿರಂಜನ ಹೆರೂರ, ವಿಜಯಕುಮಾರ ಚಿನ್ನಿಕಟ್ಟಿ, ಕಿರಣ ಕೊಳ್ಳಿ, ರೋಹಿಣಿ ಪಾಟೀಲ ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-22-1769127141

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.