ಹಾವೇರಿ: ‘ಮಾರುಕಟ್ಟೆ ಅಥವಾ ಆನ್ಲೈನ್ ಮೂಲಕ ಖರೀದಿಸುವ ವಸ್ತುಗಳಲ್ಲಿ ಏನಾದರೂ ನ್ಯೂನ್ಯತೆ ಕಂಡುಬಂದರೆ, ಮೋಸವಾದರೆ ಗ್ರಾಹಕರ ವ್ಯಾಜ್ಯಗಳ ಆಯೋಗದಲ್ಲಿ ದೂರು ದಾಖಲಿಸಲು ಅವಕಾಶವಿದೆ. ಈಗ ಗ್ರಾಹಕರಿಂದ ಆನ್ಲೈನ್ ಮೂಲಕ ದೂರು ದಾಖಲಿಸಿಕೊಳ್ಳಲು ಇ–ಜಾಗೃತಿ ಪೋರ್ಟಲ್ ವ್ಯವಸ್ಥೆ ಆರಂಭಿಸಲಾಗಿದೆ’ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಈಶ್ವರಪ್ಪ ಬಿ.ಎಸ್. ತಿಳಿಸಿದರು.

ತಾಲ್ಲೂಕಿನ ಗಾಂಧಿಪುರದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ಮತ್ತು ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಗ್ರಾಹಕ ಜಾಗೃತಿ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.

‘ಹಣ ನೀಡಿ ವಸ್ತು ಖರೀದಿಸುವ ಹಾಗೂ ಸೇವೆ ಪಡೆಯುವ ಎಲ್ಲರೂ ಗ್ರಾಹಕರಾಗುತ್ತಾರೆ. ಗ್ರಾಹಕರು ತಾವು ಖರೀದಿಸಿದ ಪ್ರತಿ ವಸ್ತುಗಳಿಗೆ ಕಡ್ಡಾಯವಾಗಿ ರಶೀದಿ ಪಡೆಯಬೇಕು. ಖರೀದಿಸಿದ ವಸ್ತುಗಳಲ್ಲಿ ನ್ಯೂನ್ಯತೆಕಂಡುಬಂದಲ್ಲಿ ಗ್ರಾಹಕರ ವ್ಯಾಜ್ಯಗಳ ಆಯೋಗದಲ್ಲಿ ದೂರು ದಾಖಲಿಸಿ ಪರಿಹಾರ ಪಡೆದುಕೊಳ್ಳಬಹುದು’ ಎಂದು ಹೇಳಿದರು.

‘ನಾವು ಖರೀದಿಸುವ ವಸ್ತುಗಳ ಗುಣಮಟ್ಟ ಹಾಗೂ ಅಳತೆ, ತೂಕ ನೋಡಿ ಖರೀದಿಸಬೇಕು. ಗ್ರಾಹಕರು ಡಿಜಿಟಲ್ ಹಣಕಾಸು ವ್ಯವಹಾರವನ್ನು ಬಹಳ ಜಾಗರೂಕತೆಯಿಂದ ಮಾಡಬೇಕು. ವಸ್ತುಗಳ ನಿಖರ ಬೆಲೆ, ಗುಣಮಟ್ಟ, ಮುಕ್ತಾಯದ ಅವಧಿ ಖಾತ್ರಿಪಡಿಸಿಕೊಂಡು ಖರೀದಿಸಬೇಕು’ ಎಂದರು.

‘ಆನ್ಲೈನ್ನಲ್ಲಿ ವಸ್ತು ಖರೀದಿಸುವಾಗ ಆಯ್ಕೆ ಮಾಡಿರುವ ವಸ್ತು ಬದಲು ಬೇರೆ ವಸ್ತು ಬರುತ್ತದೆ. ಇಂತಹ ಮೋಸ ಕಂಡುಬಂದಾಗ ಖರೀದಿಸಿದ ರಸೀದಿ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ಆಯೋಗದಲ್ಲಿ ದೂರು ದಾಖಲಿಸಬಹುದು. ಜಿಲ್ಲಾ ಮಟ್ಟದಲ್ಲಿ ₹ 50 ಲಕ್ಷದವರೆಗೂ ಪರಿಹಾರ ಕೊಡಿಸಲು ಅವಕಾಶವಿದೆ. ಹೆಚ್ಚಿನ ಪರಿಹಾರಕ್ಕೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಬಹುದು’ ಎಂದು ಹೇಳಿದರು.

ವಕೀಲ ಎಂ.ಬಿ. ಬಸವನಾಯ್ಕರ ಅವರು ಗ್ರಾಹಕ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು. ಜಿಲ್ಲಾ ಗ್ರಾಹಕರ ಆಯೋಗದ ಮದರಲಿ ಕಾಗಿನೆಲೆ ಇ–-ಜಾಗೃತಿ ಪೋರ್ಟಲ್ ಮೂಲಕ ಪ್ರಕರಣ ದಾಖಲಿಸುವ ಬಗ್ಗೆ ಮಾಹಿತಿ ನೀಡಿದರು.

ಪ್ರಾಂಶುಪಾಲರಾದ ಪರ್ಜಾನ್ ಪಠಾಣ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.