ಹಾವೇರಿ: ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಜಾತ್ರಾ ಚಟುವಟಿಕೆ ನಡೆಸಿದ ಆರೋಪದ ಮೇಲೆ ತಾಲ್ಲೂಕಿನ ಕರ್ಜಗಿಯ 40 ಮಂದಿ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

‘ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಸೇರಿದಂತೆ ಒಟ್ಟು 40 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದುವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ. ನ್ಯಾಯಾಲಯದ ಆದೇಶದಂತೆ ಮುಂದಿನ ಕ್ರಮ ಜರುಗಿಸಲಾಗುವುದು. ಸುದ್ದಿ ಗೊತ್ತಾದ ತಕ್ಷಣ ಜಾತ್ರಾ ಚಟುವಟಿಕೆಗಳನ್ನು ನಿಲ್ಲಿಸಿದ್ದೇವೆ’ ಎಂದು ಎಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ಜಗಿ ಗ್ರಾಮದಲ್ಲಿ ಜೂನ್ 9ರಿಂದ 11ರವರೆಗೆ ನಿಗದಿಯಾಗಿದ್ದ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜಾತ್ರೆಯನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.