ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಮತ್ತೊಂದು ಕೋವಿಡ್–19 ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಶಿಗ್ಗಾವಿ ನಗರದ ಗಾಡ್ರ ಓಣಿ ನಿವಾಸಿ 46 ವರ್ಷದ ಪಿ– 6832 ವ್ಯಕ್ತಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ತನ್ನ ತಾಯಿಯ (ಪಿ–6252) ಪ್ರಾಥಮಿಕ ಸಂಪರ್ಕದ ಕಾರಣ ಇವರ ಗಂಟಲು ದ್ರವದ ಮಾದರಿ ಲ್ಯಾಬ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಇವರಿಗೆ ಕೋವಿಡ್–19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈತನ ತಾಯಿ 72 ವರ್ಷದ ಮಹಿಳೆ ಪಿ–6252 ಅವರಿಗೆ ರಕ್ತದೊತ್ತಡ ಹಾಗೂ ಸಕ್ಕರೆಕಾಯಿಲೆ ಉಲ್ಬಣಗೊಂಡ ಕಾರಣ ರಾತ್ರಿ ಏಕಾಏಕಿ ಜೂನ್ 8ರಂದು ಶಿಗ್ಗಾವಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮರುದಿನ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಕಿಮ್ಸ್‌ಗೆ ದಾಖಲು ಮಾಡಲಾಗಿತ್ತು. ಮಹಿಳೆಯ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆ ಮಾಡಲಾಗಿ, ಕೋವಿಡ್–19 ಪಾಸಿಟಿವ್ ಎಂಬುದು ಖಚಿತವಾಗಿತ್ತು.ಸದ್ಯ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಟ್ಟು 24 ಸೋಂಕಿತರಲ್ಲಿ 21 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.