ಸವಣೂರು (ಹಾವೇರಿ): ‘ತಾಲ್ಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗೋವು ಸಾಗಾಟ ಮತ್ತು ಗೋವು ಹತ್ಯೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ವಿಶ್ವ ಹಿಂದೂ ಪರಿಷದ್ ಹಾಗೂ -ಬಜರಂಗದಳದ ಗೋ ರಕ್ಷಾ ವಿಭಾಗದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿರುವ ತಹಶೀಲ್ದಾರ್ ಕಚೇರಿಗೆ ಇತ್ತೀಚೆಗೆ ನಿಯೋಗದ ಮೂಲಕ ತೆರಳಿದ್ದ ಪದಾಧಿಕಾರಿಗಳು, ತಹಶೀಲ್ದಾರ್ ಅವರಿಗೆ ಮನವಿ ರವಾನಿಸಿದರು.

‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ–2020 ಜಾರಿಯಲ್ಲಿದ್ದರೂ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಗೋವು ಸಾಗಾಟ ಮತ್ತು ಗೋವು ಹತ್ಯೆ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಹಿಂದೂ ಸಂಪ್ರದಾಯದಲ್ಲಿ ಗೋವನ್ನು ಪವಿತ್ರವಾಗಿ ಪೂಜಿಸಲಾಗುತ್ತಿದ್ದು, ಗೋ ಹತ್ಯೆಯಿಂದ ಹಿಂದೂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತಿದೆ’ ಎಂದು ಅಸಮಾಧಾನ ಹೊರಹಾಕಿದರು.

ಪದಾಧಿಕಾರಿಗಳಾದ ಅರುಣ್ ಬಗರೆ, ಮಹೇಶ ಮುದಗಲ್ಲ, ಹನುಮಂತಗೌಡ ಮುದಿಗೌಡ್ರು, ಪ್ರವೀಣ ಬಾಲೆಹೊಸೂರ, ಸುಮಿತ್ ಕೆಮ್ಮಣ್ಣಕೇರಿ, ವಿನಾಯಕ ಕುಲಕರ್ಣಿ, ಸುನಿಲ್ ಹೊಸೂರ, ಉಮೇಶ ಕಳಕಪ್ಪನವರ ಹಾಗೂ ಇತರರು ಇದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-22-652534374

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.